Advertisement
ಪಕ್ಷಕ್ಕೆ ನೂತನ ರಾಜ್ಯಾಧ್ಯಕ್ಷರ ನೇಮಕ ವಿಷಯವಾಗಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸದ್ಯಕ್ಕೆ ನಿಖಿಲ್ ಕುಮಾರಸ್ವಾಮಿ ನೇಮಕದ ವಿಷಯ ಪಕ್ಷದೊಳಗೆ ಚರ್ಚೆ ಆಗಿಲ್ಲ. ಜ. 12ರಂದು ನಡೆಯಲಿರುವ ಪಕ್ಷದ ಸಭೆಯಲ್ಲಿ ಆಂತರಿಕ ಚುನಾವಣೆಯ ಬಗ್ಗೆ ಚರ್ಚೆ ಮಾಡಿ, ಅನಂತರ ತೀರ್ಮಾನ ಮಾಡಲಾಗುವುದು. ಚುನಾವಣೆಯ ಮೂಲಕವೇ ಹೊಸ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಅಪರೇಶನ್ ಹಸ್ತದ ವಿಚಾರ ಕುರಿತು ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, 18 ಜೆಡಿಎಸ್ ಶಾಸಕರ ಶಕ್ತಿ ಎಷ್ಟು ಎಂಬುದು ಕಾಂಗ್ರೆಸ್‌ನವರಿಗೆ ಗೊತ್ತಿದೆ. ಅದಕ್ಕಾಗಿ “ಆಪರೇಶನ್ ಹಸ್ತ’ ಪ್ರಯತ್ನ ನಡೆಯುತ್ತಲೇ ಇದೆ. ನಮ್ಮ ಪಕ್ಷದಲ್ಲಿ 18 ಮಂದಿ ಶಾಸಕರಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಇದ್ದಾರೆ. ಅದನ್ನೇ ಶಾಸಕ ಹರೀಶ್ ಗೌಡ ಅವರೂ ಹೇಳಿದ್ದಾರೆ. ಬೆಳಗಾವಿಯಲ್ಲಿ ಶಾಸಕರು ಕೂತು ಮಾತನಾಡಿದ್ದಾರೆ. ನಮ್ಮ ಶಾಸಕರು ನಮ್ಮ ಜತೆ ಇರುತ್ತಾರೆ ಎಂದರು.