Advertisement
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಹಾಸನ, ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಉತ್ತರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ಕೇಳುವಂತೆ ಎಚ್.ಡಿ. ದೇವೇಗೌಡರು, ಕುಮಾರಸ್ವಾಮಿಯವರಿಗೆ ಹೇಳಿದ್ದೇವೆ ಎಂದರು.
Related Articles
Advertisement
ಮಂಡ್ಯ ಜಿಲ್ಲೆಯ ಕೆರಗೋಡು ಹನುಮಧ್ವಜ ಕುರಿತ ಹೋರಾಟದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಧರಿಸಿದ್ದ ಕೇಸರಿ ಶಾಲಿನ ಮೇಲೆ ಬಿಜೆಪಿ ಚಿಹ್ನೆ ಇರಲಿಲ್ಲ. ಬಿಜೆಪಿ ತತ್ವ, ಸಿದ್ಧಾಂತ, ನೀತಿ ಬೇರೆ, ಜೆಡಿಎಸ್ ಸಿದ್ಧಾಂತ ಬೇರೆ. ನಮ್ಮ ತತ್ವ ಸಿದ್ಧಾಂತಗಳನ್ನು ಇಟ್ಟುಕೊಂಡೇ ಪಕ್ಷ ಕಟ್ಟುತ್ತೇವೆ ಎಂದರು.
ಅನುದಾನ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಿದೆ. ಹಣಕಾಸು ಆಯೋಗದ ಮಾರ್ಗಸೂಚಿ ಪ್ರಕಾರ ಅನುದಾನ ಕೊಡಲಾಗಿದೆ. ಅದರಲ್ಲಿ ಯಾವುದೇ ಅನ್ಯಾಯವಾಗಿಲ್ಲ ಅನಿಸುತ್ತದೆ. ನಮ್ಮ ರಾಜ್ಯಕ್ಕೆ ಸಿಗಬೇಕಾದ ಅನುದಾನ ಸಿಗಲೇಬೇಕು, ಅದಕ್ಕಾಗಿ ಧ್ವನಿ ಎತ್ತುತ್ತೇವೆ ಎಂದರು.
ಸಿಎಂ ಸಿದ್ದರಾಮಯ್ಯ ಈ ರಾಜ್ಯಕ್ಕೆ ಏನೇನು ಕೊಟ್ಟಿದ್ದಾರೆ? ಶಾಸಕರಿಗೆ ಕೇವಲ 50ಲಕ್ಷ ರೂ. ಅನುದಾನ ಕೊಟ್ಟಿದ್ದು ಬಿಟ್ಟರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದರು.
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲು ಸೂಕ್ತ ಅಭ್ಯರ್ಥಿ. ಅವರು ಪಿಎಂ ಆದರೆ ನಾವೆಲ್ಲಾ ಸಂತೋಷ ಪಡುತ್ತೇವೆ. ಆದರೆ ಸಿದ್ದರಾಮಯ್ಯನವರೇ ರಾಹುಲ್ ಗಾಂಧಿ ಪಿಎಂ ಆಗಲಿ ಎಂದು ಹೇಳುತ್ತಿದ್ದಾರಲ್ಲ ಎಂದು ಕುಟುಕಿದರು.