Advertisement

ನೌಕರರ ಹೋರಾಟಕ್ಕೆ ಜೆಡಿಎಸ್‌ ಬೆಂಬಲ

06:25 AM Jan 20, 2018 | |

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ವಾಪಸ್‌
ಪಡೆದು ಹಳೆಯ ನಿಶ್ಚಿತ ಪಿಂಚಣಿ ಯೋಜನೆಯನ್ನೇ ಮರು ಜಾರಿಗೊಳಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ
ರಮೇಶ್‌ಬಾಬು ಒತ್ತಾಯಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ ಬದಲಿಗೆ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ (ಜ.20) ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದು, ಜೆಡಿಎಸ್‌ ಸಹ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next