ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಹೆಚ್.ಡಿ. ದೇವೇಗೌಡ, “ನನ್ನ ಪತ್ನಿ ಚೆನ್ನಮ್ಮ ಮತ್ತು ನನಗೆ ಕೋವಿಡ್ -19 ಪಾಸಿಟಿವ್ ವರದಿ ಬಂದಿದೆ. ನಾವು ಇತರ ಕುಟುಂಬ ಸದಸ್ಯರೊಂದಿಗೆ ಸ್ವಯಂ ಐಸೋಲೇಟ್ ಗೆ ಒಳಪಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷಿಸಿಗೊಳಪಡಬೇಕೆಂದು ವಿನಂತಿಸುತ್ತೇನೆ. ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯಭೀತರಾಗುವ ಅಗತ್ಯವಿಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
Related Articles
ಮಾಜಿ ಪ್ರಧಾನಿ, ಹಿರಿಯರಾದ ಶ್ರೀ ದೇವೇಗೌಡ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅವರು ಬಹುಬೇಗ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬರಲಿ ಎಂದು ಆಶಿಸುತ್ತೇನೆ. ನಾಡಿನ ಜನತೆಯ ಪ್ರಾರ್ಥನೆ ನಿಮ್ಮೊಂದಿಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ತಿಳಿಸಿದ್ದಾರೆ.