Advertisement
ಕೋಲಾರ ಕ್ಷೇತ್ರ ಬಿಟ್ಟುಕೊಡುವ ವಿಚಾರದಲ್ಲಿ ಮೀನಮೇಷ ಎಣಿಸುತ್ತಿರುವ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರುವ ಅವರು ಮಂಡ್ಯ, ಹಾಸನದ ಜತೆ ಕೋಲಾರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ ಎಂದು ಘೋಷಿಸಿದ್ದಾರೆ. ಸೋಮವಾರ ಜೆಡಿಎಸ್‌ನ ರಾಜ್ಯ ಕಚೇರಿಯಲ್ಲಿ ಕರೆಯಲಾಗಿದ್ದ ಕೋರ್ ಕಮಿಟಿ ಸಭೆ ಹಾಗೂ ಚುನಾವಣ ಉಸ್ತುವಾರಿಗಳ ಸಭೆಗಳು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ವೇದಿಕೆಯಾಗಿ ಮಾರ್ಪಟ್ಟಿತ್ತು.
ಮೈತ್ರಿ ಅಗತ್ಯವಿಲ್ಲ
ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಅಗತ್ಯವಿಲ್ಲ. ನಮಗೆ ಮೋದಿ ಅವರ ಬಗ್ಗೆ ಅಪಾರ ಗೌರವ ಇದೆ. ಆದರೆ ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷಿಸಿರಲಿಲ್ಲ. ಕೇವಲ 2 ಸೀಟಿಗಾಗಿ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬೇಕಿತ್ತೇ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂತಹ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ನೇರವಾಗಿ ಹೇಳಿದರು. ಪ್ರಧಾನಿ ಬಂದಾಗಲೂ ನಿರ್ಲಕ್ಷ್ಯ
ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ, ಭಾಷಣ ಮಾಡಿ ಹೋಗುತ್ತಿದ್ದಾರೆ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಕರೆದಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು, ಕರೆದಿಲ್ಲ ಎಂದು ಮುಖಂಡರು ಸಿಟ್ಟು ಹೊರಹಾಕಿದರು.
Related Articles
ಮುಖಂಡರ ಮಾತುಗಳನ್ನು ಆಲಿಸಿದ ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿಯವರು ಮುಖಂಡರಿಗೆ ಸಮಾಧಾನ ಹೇಳಿದರು. ಇನ್ನೊಮ್ಮೆ ಅಮಿತ್ ಶಾ, ನಡ್ಡಾ ಜತೆ ಮಾತನಾಡುವಂತೆ ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಿದ ಮಾಜಿ ಪ್ರಧಾನಿ, ಇಲ್ಲವಾದರೆ ನಾನೇ ದಿಲ್ಲಿಗೆ ಹೋಗಿ ಬರುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ ಎಂದರು.
Advertisement