ಬೆಂಗಳೂರು: ಈಗಲ್‌ಟನ್ ರೆಸಾರ್ಟ್‌ನಲ್ಲಿ ಬಳ್ಳಾರಿ ಶಾಸಕರ ನಡುವಿನ ಮಾರಾಮಾರಿ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ಜೆಡಿಎಸ್ ತೀರ್ಮಾನಿಸಿದೆ.
ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಕಾಂಗ್ರೆಸ್ ಶಾಸಕರ ಮಾರಾಮಾರಿ ಪ್ರಕರಣವನ್ನು ಬಿಜೆಪಿ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆಯೂ ಇರುವುದರಿಂದ ಪ್ರಕರಣದ ಬಗ್ಗೆ ಯಾರೂ ಬಹಿರಂಗವಾಗಿ ಹೇಳಿಕೆ ನೀಡಬಾರದೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಪಕ್ಷದ ಸಚಿವರು ಹಾಗೂ ಶಾಸಕರಿಗೆ ತಾಕೀತು ಮಾಡಿದ್ದಾರೆ.
ಬಿಜೆಪಿಯವರ ಆಪರೇಷನ್ ಕಮಲ ಕಾರ್ಯಾಚರಣೆ ಆತಂಕದಿಂದಲೇ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರುವಂತಾ ಗಿದ್ದು, ಅಲ್ಲಿ ನಡೆದ ಮಾರಾಮಾರಿ ಬಗ್ಗೆ ಮಾತನಾಡದೆ ಮೌನ ವಹಿಸುವುದು ಸೂಕ್ತ ಎಂಬುದು ಜೆಡಿಎಸ್ ನಿಲುವು ಎಂದು ಹೇಳಲಾಗಿದೆ.
ಮತ್ತೂಂದೆಡೆ, ಕುಮಾರಸ್ವಾಮಿಯವರು ಘಟನೆ ಬಗ್ಗೆ ವೈಯಕ್ತಿಕವಾಗಿ ಬೇಸರಗೊಂಡಿದ್ದು, ಮಾರಾಮಾರಿ ಪ್ರಕರಣ ಸಮ್ಮಿಶ್ರ ಸರ್ಕಾರದ ವರ್ಚಸ್ಸಿಗೆ ಕುಂದು ತಂದಿದೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದದ್ದು ಹಾಗೂ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ದದ್ದು ಕುಮಾರಸ್ವಾಮಿಯವರಿಗೆ ಇಷ್ಟವಿರಲಿಲ್ಲ ಎನ್ನಲಾಗಿದೆ. ಆದರೂ, ಸದ್ಯದ ವಿದ್ಯಮಾನಗಳ ಬಗ್ಗೆ ಬಹಿರಂಗವಾಗಿ ವಿರುದ್ಧ ವಾದ ಹೇಳಿಕೆ ನೀಡದಿರಲು ನಿರ್ಧರಿಸಿರುವ ಅವರು, ಪ್ರಕರಣದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಕೈಗೊಳ್ಳುವ ಕ್ರಮ ನೋಡಿ ನಂತರ ಪ್ರತಿಕ್ರಿಯಿಸಲಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ, ಭಾನುವಾರ ಸಂಜೆಯೇ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್
ಆಯುಕ್ತರು ಹಾಗೂ ಅಪೋಲೋ ಆಸ್ಪತ್ರೆ ವೈದ್ಯರಿಂದ ಆನಂದ್‌ಸಿಂಗ್ ಮೇಲಿನ ಹಲ್ಲೆ ಹಾಗೂ ಚಿಕಿತ್ಸೆ