Advertisement

ಜೆಇಇ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

01:06 PM May 05, 2018 | Team Udayavani |

ಭಾಲ್ಕಿ: ವಿದ್ಯಾರ್ಥಿಗಳು ಜೀವನದಲ್ಲಿ ಅಪ್ರತಿಮವಾದದ್ದನ್ನು ಸಾಧಿಸಲು ನಿರಂತರ ಅಧ್ಯಯನಶೀಲರಾಗಬೇಕು ಎಂದು ಅನುಭವ ಮಂಟಪದ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು. ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಜೆಇಇ ಮೇನ್ಸ್‌ ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕ್‌ ಪಡೆದ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಕಾಲೇಜಿನ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

Advertisement

ಪಿಯುಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ದೇಶದ ಪ್ರಮುಖ ವೈದ್ಯ, ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸೀಟು ಪಡೆಯಲು ಆಳವಾದ ಅಧ್ಯಯನ ಅಗತ್ಯ ಎಂದು ಹೇಳಿದರು. ಹಿರೇಮಠದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಹೊಂದಿರುವ ಗುರಿ ತಲುಪಲು ಸತತ ಪ್ರಯತ್ನ ಮಾಡಬೇಕು. ಸಮಯದ ಸದುಪಯೋಗ ಪಡೆಯಬೇಕು ಎಂದು ಸಲಹೆ ನೀಡಿದರು. ಪ್ರಾಚಾರ್ಯ ಬಸವರಾಜ್‌ ಮೊಳಕೀರೆ, ಸುಭಾಷ
ಪೂಜಾರಿ, ಸಂತೋಷ ಇನಾಮತೆ, ವಿದ್ಯಾರ್ಥಿಗಳಾದ ಸೂರ್ಯಕಾಂತ, ರಾಮರಾವ್‌, ಅಶೋಕ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next