Advertisement

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

09:36 PM Dec 21, 2024 | Team Udayavani |

ಕೋಟಾ: ಜೆಇಇಗೆ ಅಭ್ಯಾಸ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿಯೊಬ್ಬ ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Advertisement

ವಿದ್ಯಾರ್ಥಿಯು ಬಿಹಾರ ಮೂಲದವನಾದವನಾಗಿದ್ದು, 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಹಾಸ್ಟೆಲ್‌ ರೂಮಿನ ಫ್ಯಾನ್‌ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸದ್ಯ ಪೊಲೀಸರು ಆತ್ಮಹತ್ಯೆ ಎಂದೇ ಪರಿಗಣಿಸಿದ್ದು, ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ವಿದ್ಯಾರ್ಥಿಯ ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರೊಂದಿಗೆ ಕೋಟಾದಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 17ಕ್ಕೇರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next