Advertisement
ಈಗಾಗಲೇ ಮಧ್ಯಪ್ರದೇಶ, ಒಡಿಶಾ, ಛತ್ತೀಸ್ ಗಢ ರಾಜ್ಯಗಳು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿವೆ.
Related Articles
Advertisement
ರಾಜ್ಯದಲ್ಲಿ ಎಲ್ಲ ರೀತಿಯ ಸಹಕಾರನೀಟ್ ಮತ್ತು ಜೆಇಇ ಮೇನ್‌ಪರೀಕ್ಷೆಯನ್ನು ನಿರ್ದಿಷ್ಟ ಪರೀಕ್ಷಾ ಏಜೆನ್ಸಿ ನಡೆಸಲಿದ್ದು, ರಾಜ್ಯದಿಂದ ಎಲ್ಲ ಸಹಕಾರವನ್ನು ನೀಡಲು ಸರಕಾರ ನಿರ್ಧರಿಸಿದೆ. ರಾಜ್ಯದ ಸುಮಾರು 50 ಸಾವಿರ ವಿದ್ಯಾರ್ಥಿಗಳು ಜೆಇಇ ಬರೆಯಲಿದ್ದಾರೆ. 6 ದಿನಗಳ ಕಾಲ ಪರೀಕ್ಷೆ ನಡೆಯುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ಪರೀಕ್ಷೆ ನಡೆಸುವ ಸಂಸ್ಥೆಗೆ ರಾಜ್ಯ ಸರಕಾರದಿಂದ ಎಲ್ಲ ರೀತಿಯ ಸಹಕಾರವನ್ನು ನೀಡಲಿದ್ದೇವೆ ಎಂದು ಡಿಸಿಎಂ, ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ‘ಉದಯವಾಣಿ’ ಜತೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಎಲ್ಲ ವ್ಯವಸ್ಥೆ ಮಾಡಲಿದ್ದೇವೆ ಮತ್ತು ಪರೀಕ್ಷಾ ಏಜೆನ್ಸಿಗೆ ಎಲ್ಲ ರೀತಿಯ ಸಹಕಾರವನ್ನು ಒದಗಿಸಲಿದ್ದೇವೆ ಎಂದಿದ್ದಾರೆ.