Advertisement

ಜೇವರ್ಗಿ ಮಾದರಿ ಕ್ಷೇತ್ರವಾಗಿಸುವೆ: ಅಜಯಸಿಂಗ್‌

10:47 AM Sep 07, 2017 | Team Udayavani |

ಜೇವರ್ಗಿ: ಹೆಚ್ಚಿನ ಅನುದಾನ ತಂದು ಬರುವ ದಿನಗಳಲ್ಲಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವೆ ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು. 

Advertisement

ತಾಲೂಕಿನ ನರಿಬೋಳ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ, ವಸತಿ ಗೃಹ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಆಂದೋಲಾ, ಬಿರಾಳ, ಅಂಕಲಗಾ ಗ್ರಾಮಗಳಲ್ಲಿ ಆರೋಗ್ಯ ಕೇಂದ್ರದ ಕಟ್ಟಡ ಪೂರ್ಣಗೊಳ್ಳುವ ಹಂತಕ್ಕೆ ತಲುಪಿದ್ದು,
ಶೀಘ್ರವೇ ಉದ್ಘಾಟನೆಗೊಳ್ಳಲಿವೆ. ನರಿಬೋಳ ಆಸ್ಪತ್ರೆ ಕಟ್ಟಡಕ್ಕೆ 2.25 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಅಲ್ಲದೆ ಈ ಭಾಗದ ಜನರ ಬಹುದಿನಗಳ ಬೇಡಿಕೆ ಆಗಿರುವ ನರಿಬೋಳ-ಚಾಮನೂರ ಸೇತುವೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಕಳೆದ 4 ವರ್ಷಗಳ ಅವಧಿಯಲ್ಲಿ ತಾಲೂಕಿನಲ್ಲಿ ಮೂರು ಸೇತುವೆಗಳು, ಒಂದು ಬ್ರಿಡ್ಜ್  ಕಂ ಬ್ಯಾರೇಜ್‌ ನಿರ್ಮಿಸಲಾಗುತ್ತಿದೆ. ಕ್ಷೇತ್ರದ ಎಲ್ಲ ಹೋಬಳಿ ಕೇಂದ್ರಗಳಲ್ಲಿ 50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಬೀದಿ ದೀಪ ಅಳವಡಿಸಲಾಗುತ್ತಿದೆ. ಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನ ತಂದು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ ಶರಣಪ್ಪ ಹರನೂರ ಅಧ್ಯಕ್ಷತೆ ವಹಿಸಿದ್ದರು, ತಾಪಂ ಅಧ್ಯಕ್ಷೆ ಚಂದಮ್ಮ ಸಂಗಣ್ಣ ಇಟಗಾ, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕ್ಕೆಮ್ಮ ಚನ್ನಮಲ್ಲಯ್ಯ ಹಿರೇಮಠ, ಜಿಪಂ ಸದಸ್ಯ ಶಿವರಾಜ
ಪಾಟೀಲ ರದ್ದೇವಾಡಗಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

Advertisement

ಮುಖಂಡರಾದ ರಾಜಶೇಖರ ಸೀರಿ, ಜಿಪಂ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಆಂದೋಲಾ, ಶಾಂತಗೌಡ ಪಾಟೀಲ, ಹಣಮಂತ್ರಾಯ ಕುಲಕರ್ಣಿ, ವಸಂತ ನರಿಬೋಳ, ಗುರುರಾಜ ಸುಬೇದಾರ, ನಾಗಣ್ಣ ಗಡ್ಡದ್‌, ಶಿವಶರಣಪ್ಪ ಕೋಬಾಳ ಮತ್ತಿತರರು ಭಾಗವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ| ಸಿದ್ದು ಪಾಟೀಲ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next