Advertisement

ಶಸ್ತ್ರಧಾರಿ ಸೈನಿಕರ ಜೊತೆ ‘ಅಪ್ಪು’|’ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್’ಎಂದ ‘ಜೇಮ್ಸ್’

05:50 PM Aug 15, 2021 | Team Udayavani |

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ತಮ್ಮ ಅಭಿಮಾನಿಗಳಿಗೆ ಸ್ವಾತಂತ್ರ್ಯೋತ್ಸವಕ್ಕೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಅಪ್ಪು ನಟಿಸುತ್ತಿರುವ ಜೇಮ್ಸ್ ಚಿತ್ರದ ನ್ಯೂ ಲುಕ್ ಇಂದು ಬಿಡುಗಡೆಯಾಗಿದೆ.

Advertisement

ನಿರ್ದೇಶಕ ಚೇತನ್​ ಕುಮಾರ್​ ಅವರು ಪುನೀತ್​ ರಾಜ್​ಕುಮಾರ್​ ‘ಜೇಮ್ಸ್​’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಈಗಾಗಲೇ ಶೂಟಿಂಗ್ ಕೂಡ ಮುಕ್ತಾಯವಾಗಿದೆ. ಇದೀಗ ಚಿತ್ರತಂಡದಿಂದ ಅಭಿಮಾನಿಗಳಿಗೆ ಬಂಪರ್ ಗಿಫ್ಟ್ ಸಿಕ್ಕಿದ್ದು, ಸಿನಿಮಾ ಫೋಸ್ಟರ್ ರಿಲೀಸ್ ಆಗಿದೆ.

ಸದ್ಯ ಬಿಡುಗಡೆಯಾಗಿರುವ ಲುಕ್ ನಲ್ಲಿ ಶಸ್ತ್ರಧಾರಿ ಸೈನಿಕರ ಮಧ್ಯದಲ್ಲಿ ಪುನೀತ್​ ರಾಜ್​ಕುಮಾರ್​ ನಿಂತಿದ್ದಾರೆ. ಸೈನಿಕರ ಜತೆ ಪುನೀತ್​ ಕೂಡ ಕಪ್ಪನೆಯ ಬಟ್ಟೆ ತೊಟ್ಟು ಕಾಣಿಸಿಕೊಂಡಿದ್ದಾರೆ. ‘ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್’ ಎನ್ನುವ ಕ್ಯಾಪ್ಶನ್‌ಅನ್ನು ಪೋಸ್ಟರ್​ಗೆ​ ನೀಡಲಾಗಿದೆ.

ಚೇತನ ಕುಮಾರ್ ಅವರು ‘ಬಹದ್ದೂರ್’​, ‘ಭರ್ಜರಿ’, ‘ಭರಾಟೆ’ ಸಿನಿಮಾ ನಂತರ ‘ಜೇಮ್ಸ್​’ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ ಈ ವರ್ಷ ಜೇಮ್ಸ್ ಸಿನಿಮಾ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ.

Advertisement

ಇನ್ನು ಪುನೀತ್ ರಾಜಕುಮಾರ್ ಅವರು ಯುವರತ್ನ ನಂತರ ಜೇಮ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ದ್ವಿತ್ವ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಚಿತ್ರವನ್ನು ಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್ ಅವರು ನಿರ್ದೇಶನ ಮಾಡಲಿದ್ದಾರೆ. ಈಗಾಗಲೇ ಈ ಚಿತ್ರದ ಫೋಸ್ಟರ್ ಸಖತ್ ಹಿಟ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ​

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next