Advertisement

ಕೊರೊನಾ ತಡೆಗೆ ಶ್ರಮಿಸಿ: ಪಾಟೀಲ

03:45 PM Apr 08, 2020 | Naveen |

ಜೇವರ್ಗಿ: ಕೊರೊನಾ ಸಾಂಕ್ರಾಮಿಕ ರೋಗವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಭಯಪಡದೇ ಮುಂಜಾಗ್ರತಾ ಕ್ರಮ ವಹಿಸಿ ಈ ಮಹಾಮಾರಿ ತಡೆಗಟ್ಟಲು ಶ್ರಮಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

Advertisement

ಪಟ್ಟಣದ ಬಸವೇಶ್ವರ ವೃತ್ತದ ಬಳಿ ಮಂಗಳವಾರ ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಜೇವರ್ಗಿಗೆ ಭೇಟಿ ನೀಡಿದ ಅವರು, ಬಡವರು, ರೈತರು, ಕೂಲಿ ಕಾರ್ಮಿಕರು, ಪೊಲೀಸ್‌ ಸಿಬ್ಬಂದಿಗಳು ಸೇರಿದಂತೆ ಕೊರೊನಾ ವೈರಸ್‌ ತಡೆಗಟ್ಟಲು ಶ್ರಮಿಸುತ್ತಿರುವ ಆರೋಗ್ಯ, ಆಶಾ- ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ ವಿತರಿಸಿ ಮಾತನಾಡಿದರು.

ಕೊರೊನಾ ಮಹಾಮಾರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಮದ್ದು. ಇದು ಸಾಂಕ್ರಾಮಿಕ ರೋಗವಾಗಿದ್ದು, ಯಾರೊಬ್ಬರೂ ಮನೆಯಿಂದ ಹೊರಬರಬಾರದು. ಸರ್ಕಾರದ ಆದೇಶ ಪಾಲಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ಧೇವಾಡಗಿ, ರಮೇಶಬಾಬು ವಕೀಲ, ಸಾಯಬಣ್ಣ ದೊಡ್ಡಮನಿ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಭೀಮರಾವ್‌ ಗುಜಗೊಂಡ, ಬಸವರಾಜ ಸಾಸಾಬಾಳ, ಸಂಗನಗೌಡ ರದ್ಧೇವಾಡಗಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next