Advertisement

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

09:44 AM Jan 05, 2025 | Team Udayavani |

ಬೆಂಗಳೂರು: ನವವಿವಾಹಿತನೊಬ್ಬ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್‌.ಟಿ.ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ದೇವಿಲಾಲ್ (30) ಆತ್ಮಹತ್ಯೆ ಮಾಡಿಕೊಂಡವ. ಆರ್‌.ಟಿ.ನಗರದ ಚಾಮುಂಡೇಶ್ವರಿ ನಗರದ ನಿವಾಸಿ ದೇವಿಲಾಲ್‌ ಶುಕ್ರವಾರ ರಾತ್ರಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ.

ರಾಜಸ್ತಾನ ಮೂಲದ ದೇವಿಲಾಲ್ ಗೆ ಒಂದು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಮೃತನ ಪೋಷಕರ ಜತೆ ಚಾಮುಂಡೇಶ್ವರಿ ನಗರದಲ್ಲಿ ವಾಸವಾಗಿದ್ದ. ತಂದೆ ಶಂಭುಲಾಲ್‌ ಚಿನ್ನದ ವ್ಯಾಪಾರ ಮಾಡುತ್ತಿದ್ದು, ದೇವಿಲಾಲ… ಸಹ ಇದೇ ಕೆಲಸ ಮಾಡುತ್ತಿದ್ದ. ಸಂಬಂಧಿಕರೊಬ್ಬರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮೃತನ ಪಾಲಕರು ಹಾಗೂ ಪತ್ನಿ ಎಲ್ಲರೂ ಮೂರು ದಿನಗಳ ಹಿಂದೆ ರಾಜಸ್ತಾನಕ್ಕೆ ತೆರಳಿದ್ದರು. ಈತ ಮನೆಯಲ್ಲಿ ಒಬ್ಬನೇ ಉಳಿದುಕೊಂಡಿದ್ದ ಎಂದು ಪೊಲೀಸರು ಹೇಳಿದರು.

ಶುಕ್ರವಾರ ತನ್ನ ತಂದೆಯೊಂದಿಗೆ ಕರೆ ಮಾಡಿ ಮಾತನಾಡಿದ್ದ ದೇವಿಲಾಲ್‌, ಅದೇ ದಿನ ರಾತ್ರಿ ಮನೆಯಲ್ಲಿ ಮದ್ಯಸೇವಿಸಿ ಬಳಿಕ ಹೊಟೇಲ್ ನಿಂದ ಊಟ ತರಿಸಿಕೊಂಡು ತಿಂದಿದ್ದಾನೆ. ಕೆಲಹೊತ್ತಿನ ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪಾಲಕರಿಗೆ ವಿಷಯ ತಿಳಿಸಲಾಗಿದ್ದು, ಅವರು ರಾಜಸ್ತಾನದಿಂದ ನಗರಕ್ಕೆ ಬರುತ್ತಿದ್ದಾರೆ. ಸದ್ಯ ಮೃತನ ಮೊಬೈಲ್ ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರ್‌.ಟಿ.ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next