Advertisement
ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಆಡಳಿತದ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಸಮಾಜವಾದಿ ಪಕ್ಷ ಆರೋಪಿಸಿದೆ, ಅಲ್ಲದೆ ಶುಕ್ರವಾರ ಮಧ್ಯಾಹ್ನದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದರೂ ಅದನ್ನು ಕಡೆಗಣಿಸಲಾಗಿದೆ ಎಂದು ಹೇಳಲಾಗಿದೆ.
Related Articles
Advertisement
ಪ್ರಧಾನಿ ಸಂತಾಪ:
ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ನವಜಾತ ಶಿಶುಗಳು ಮೃತಪಟ್ಟ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು ಮುಗ್ದ ಮಕ್ಕಳನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಮೋದಿ ಪ್ರಾರ್ಥಿಸಿದ್ದಾರೆ. ಘಾತಃನೆ ಕುರಿತು ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, ಪ್ರಾಥಮಿಕ ವರದಿಯ ಪ್ರಕಾರ ಆಮ್ಲಜನಕದ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ ಇದರ ತನಿಖೆ ನಡೆಯುತ್ತಿದ್ದು. ಘಟನೆಯಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿದ್ದು, 7 ಮಂದಿಯನ್ನು ಗುರುತಿಸಲಾಗಿದೆ, 3 ಮಂದಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು ಸುತ್ತು ಕರಕಲಾಗಿರುವ ಪರಿಣಾಮ ಅಗತ್ಯವಿದ್ದರೆ ಡಿಎನ್ಎ ಪರೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ