Advertisement

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

10:49 AM Nov 16, 2024 | Team Udayavani |

ಉತ್ತರ ಪ್ರದೇಶ: ಇಲ್ಲಿನ ಝಾನ್ಸಿಯ ಆಸ್ಪತ್ರೆಯೊಂದರ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ(ಎನ್‌ಐಸಿಯು) ಶುಕ್ರವಾರ(ನ.15) ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ನವಜಾತ ಶಿಶುಗಳು ಸಾವನ್ನಪ್ಪಿದ ನಂತರ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ.

Advertisement

ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಆಡಳಿತದ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಸಮಾಜವಾದಿ ಪಕ್ಷ ಆರೋಪಿಸಿದೆ, ಅಲ್ಲದೆ ಶುಕ್ರವಾರ ಮಧ್ಯಾಹ್ನದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದರೂ ಅದನ್ನು ಕಡೆಗಣಿಸಲಾಗಿದೆ ಎಂದು ಹೇಳಲಾಗಿದೆ.

ಏತನ್ಮಧ್ಯೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು ಶನಿವಾರ ಸಂಜೆಯೊಳಗೆ ವರದಿ ನೀಡುವಂತೆ ಆದೇಶಿಸಿದ್ದಾರೆ. ಜೊತೆಗೆ ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ಇಡೀ ವಾರ್ಡ್ ಆವರಿಸಿಕೊಂಡು ಬೆಂಕಿಯ ಕೆನ್ನಾಲಿಗೆ ದೊಡ್ಡ ಮಟ್ಟದಲ್ಲಿ ಉಂಟಾಗಿ ಹೆಚ್ಚಿನ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಅವಘಡ ಸಂಭವಿಸಿದ ಸಮಯದಲ್ಲಿ ಸುಮಾರು 47 ನವಜಾತ ಶಿಶುಗಳು ವಾರ್ಡ್‌ ನಲ್ಲಿತ್ತು ಎನ್ನಲಾಗಿದೆ. ಕೂಡಲೆ ಕಾರ್ಯಪ್ರವೃತ್ತರಾದ ಸಿಬಂದಿ ಹಾಗೂ ವೈದ್ಯರು ಮೂವತ್ತೇಳು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಬೆಂಕಿ ಇಡೀ ವಾರ್ಡ್ ಆವರಿಸಿಕೊಂಡ ಪರಿಣಾಮ ಹತ್ತು ಮಕ್ಕಳು ಬೆಂಕಿಗಾಹುತಿಯಾಗಿದ್ದಾರೆ ಎನ್ನಲಾಗಿದೆ.

Advertisement


ಪ್ರಧಾನಿ ಸಂತಾಪ:
ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ನವಜಾತ ಶಿಶುಗಳು ಮೃತಪಟ್ಟ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು ಮುಗ್ದ ಮಕ್ಕಳನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಮೋದಿ ಪ್ರಾರ್ಥಿಸಿದ್ದಾರೆ.

ಘಾತಃನೆ ಕುರಿತು ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, ಪ್ರಾಥಮಿಕ ವರದಿಯ ಪ್ರಕಾರ ಆಮ್ಲಜನಕದ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ ಇದರ ತನಿಖೆ ನಡೆಯುತ್ತಿದ್ದು. ಘಟನೆಯಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿದ್ದು, 7 ಮಂದಿಯನ್ನು ಗುರುತಿಸಲಾಗಿದೆ, 3 ಮಂದಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು ಸುತ್ತು ಕರಕಲಾಗಿರುವ ಪರಿಣಾಮ ಅಗತ್ಯವಿದ್ದರೆ ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Advertisement

Udayavani is now on Telegram. Click here to join our channel and stay updated with the latest news.

Next