Advertisement

ಜಾರ್ಖಂಡ್ ಎರಡನೇ ಹಂತದ ಚುನಾವಣೆ: ಮುಖ್ಯಮಂತ್ರಿ ಸೇರಿ ಹಲವರು ಕಣದಲ್ಲಿ

09:51 AM Dec 08, 2019 | keerthan |

ರಾಂಚಿ: ಜಾರ್ಖಂಡ್ ರಾಜ್ಯದ ವಿಧಾನ ಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. 20 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಭಾರಿ ಭದ್ರತೆ ಒದಗಿಸಲಾಗಿದೆ.

Advertisement

29 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 260 ಅಭ್ಯರ್ಥಿಗಳು ಕಣದಲ್ಲಿದ್ದು, ತಮ್ಮ  ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸುಮಾರು 6066 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ 1016 ಮತಗಟ್ಟೆಗಳು ಪಟ್ಟಣ ಪ್ರದೇಶದಲ್ಲಿದ್ದು ಉಳಿದವುಗಳು ಹಳ್ಳಿಗಳಲ್ಲಿವೆ.

ನಕ್ಸಲ್ ಚಟುವಟಿಕೆಗಳಿಗೆ ಹೆಸರಾಗಿರುವ ಕಾರಣ ಕ್ಷೇತ್ರಗಳಲ್ಲಿ ಭಾರಿ ಭದ್ರತೆ ಮಾಡಲಾಗಿದೆ. ಸುಮಾರು 40 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಶಾಂತಿಯುತ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಒಟ್ಟು 20 ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳು ಪರಿಶಿಷ್ಟ ಪಂಗಡ ಮತ್ತು ಒಂದು ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next