ರಾಂಚಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗ ಶಿಫಾರಸ್ಸು ಮಾಡಿದ್ದು, ಇದು ಭಾರತೀಯ ಜನತಾ ಪಕ್ಷಕ್ಕೆ ಸಂದ ದೊಡ್ಡ ಗೆಲುವಾಗಿದೆ ಎಂದು ಬಿಜೆಪಿ ಸಂಸದ ನಿಷಿಕಾಂತ್ ದುಬೆ ಗುರುವಾರ(ಆಗಸ್ಟ್ 25) ತಿಳಿಸಿದ್ದಾರೆ.
ಇದನ್ನೂ ಓದಿ:ಬಸ್ ಹತ್ತುವ ವೇಳೆ ಮಹಿಳೆಯ ಬ್ಯಾಗ್ ನಿಂದ 9 ಲಕ್ಷ ರೂ ಮೌಲ್ಯದ ಚಿನ್ನದ ಸರ ಎಗರಿಸಿದ ಕಳ್ಳರು
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೊರೇನ್, ನನ್ನ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸ್ಸು ಮಾಡಿದೆ ಎಂಬ ಹಲವಾರು ಮಾಧ್ಯಮಗಳಲ್ಲಿ ವರದಿ ಬಂದಿದ್ದನ್ನು ಗಮನಿಸಿದ್ದೇನೆ. ಆದರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ.
ಹೇಮಂತ್ ಸೊರೇನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಜಾರ್ಖಂಡ್ ರಾಜ್ಯಪಾಲರು ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಿದ್ದರು. ಇದು ನಿಜಕ್ಕೂ ಬಿಜೆಪಿ ಸಂಭ್ರಮಿಸಬೇಕಾದ ವಿಚಾರವಾಗಿದೆ. ಯಾಕೆಂದರೆ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಿತ್ತು ಎಂದು ನಿಷಿಕಾಂತ್ ಟ್ವೀಟ್ ಮಾಡಿದ್ದಾರೆ.
ಏನೇ ಆದರೂ ಕೂಡಾ ನಮಗೆ ಬಹುಮತ ಇದೆ ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ ತಿಳಿಸಿದ್ದು, ತನಗೆ ಚುನಾವಣಾ ಆಯೋಗದಿಂದ ಯಾವುದೇ ಮುಚ್ಚಿದ ಲಕೋಟೆ ಬಂದಿಲ್ಲ ಎಂದು ಸಿಎಂ ಸೊರೇನ್ ವಿವರಿಸಿದ್ದು, ನಾವು ಒಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಅಲಾಂಗಿರ್ ಅಲಾಮ್ ತಿಳಿಸಿದ್ದಾರೆ.