ರಾಂಚಿ: ಜಾರ್ಖಂಡ್ ನ ಆಡಳಿತಾರೂಢ ಜೆಎಂಎಂ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಶಾಸಕರು ಗುರುವಾರ (ಸೆ.01) ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಪ್ರತಾಪ್ ಸಿಂಹ ಎನ್ ದೊಡ್ಡ ಎಂಜಿನಿಯರ್ರಾ..?: ಕಿಡಿಕಾರಿದ ಕುಮಾರಸ್ವಾಮಿ
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಬಿಜೆಪಿ ದೂರು ನೀಡಿದ್ದರಿಂದ ಸೋರೆನ್ ಅನರ್ಹತೆ ಭೀತಿ ಎದುರಿಸುವಂತಾಗಿದೆ.
ಸಿಎಂ ಹೇಮಂತ್ ಸೋರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ರಾಜ್ಯಪಾಲ ಬೈಸ್ ಅವರು ವರದಿ ಆಧಾರದ ಮೇಲೆ ಚುನಾವಣಾ ಆಯೋಗ ಅನರ್ಹಗೊಳಿಸಲು ಶಿಫಾರಸ್ಸು ಮಾಡಿದ ಬಳಿಕ ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟು ಎದುರಿಸುವಂತಾಗಿದೆ ಎಂದು ವರದಿ ಹೇಳಿದೆ.
ಜೆಎಂಎಂ-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ ಎಂದು ಪ್ರತಿಪಾದಿಸಿರುವ ಬಿಜೆಪಿ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿತ್ತು.
ಅನರ್ಹಗೊಳಿಸುವ ಬಗ್ಗೆ ಚುನಾವಣಾ ಆಯೋಗ ಈಗಾಗಲೇ ವಿಚಾರಣೆ ನಡೆಸಿದ್ದು, ಆಯೋಗ ತನ್ನ ಅಭಿಪ್ರಾಯವನ್ನು ರಾಜ್ಯಪಾಲರಿಗೆ ಕಳುಹಿಸಿದ್ದು, ಸೋರೆನ್ ಭವಿಷ್ಯ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ. ಏತನ್ಮಧ್ಯೆ ಜೆಎಂಎಂ, ಕಾಂಗ್ರೆಸ್ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ತಮಗೆ ಬಹುಮತ ಇದ್ದಿರುವುದಾಗಿ ತಿಳಿಸಿದ್ದಾರೆ.