Advertisement

Jharkhand: ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ನಿಧನ

11:43 AM Apr 06, 2023 | |

ರಾಂಚಿ: ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ಗುರುವಾರ ಬೆಳಗ್ಗೆ( ಏ.6 ರಂದು) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Advertisement

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾ. 14 ರಿಂದ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಈ ಹಿಂದೆ ಸಚಿವರಿಗೆ ಕೋವಿಡ್‌ ಸೋಂಕು ತಗುಲಿತ್ತು. ಆ ಕಾರಣದಿಂದ ಅವರ ಶ್ವಾಸಕೋಶವನ್ನು ಕಸಿ ಮಾಡಲಾಗಿತ್ತು. ಅಂದಿನಿಂದ ಅವರ ಆರೋಗ್ಯದಲ್ಲಿ ನಾನಾ ತೊಂದರೆ ಕಾಣಿಸಿಕೊಂಡಿತ್ತು. ಇತ್ತೀಚೆಗೆ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಜಗರ್ನಾಥ್ ಮಹತೋ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆ ನಂತರ ಅವರನ್ನು ಆಂಬ್ಯುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಗಿತ್ತು.

ಜಗರ್ನಾಥ್ ಮಹತೋ ಜೆಎಂಎಂ ಪಕ್ಷದ, ಗಿರಿದಿಹ್‌ನ ಡುಮ್ರಿ ಕ್ಷೇತ್ರದ ಹಿರಿಯ ಶಾಸಕರಾಗಿದ್ದರು. ಶಿಬು ಸೊರೆನ್ ನೇತೃತ್ವದ ಪ್ರತ್ಯೇಕ ರಾಜ್ಯ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next