Advertisement

ಜಾರ್ಖಂಡ್: ನ.30ರಿಂದ 5 ಹಂತಗಳಲ್ಲಿ ವಿಧಾನಸಭೆ ಚುನಾವಣೆ, ಡಿಸೆಂಬರ್ 23ರಂದು ಫಲಿತಾಂಶ

08:23 AM Nov 02, 2019 | Nagendra Trasi |

ನವದೆಹಲಿ: ಹರ್ಯಾಣ, ಮಹಾರಾಷ್ಟ್ರ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದ ಬೆನ್ನಿಗೆ ಇದೀಗ ಜಾರ್ಖಂಡ್ ವಿಧಾನಸಭಾ ಕ್ಷೇತ್ರಕ್ಕೆ ಐದು ಹಂತಗಳಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ದಿನಾಂಕ ಘೋಷಿಸಿದೆ.

Advertisement

ನವೆಂಬರ್ 30ರಿಂದ ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಂತರ ಡಿಸೆಂಬರ್ 7, ಡಿಸೆಂಬರ್ 12, ಡಿಸೆಂಬರ್ 16 ಮತ್ತು ಡಿಸೆಂಬರ್ 20ರಂದು ಮತದಾನ ನಡೆಯಲಿದೆ. ಡಿ.23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಕೇಂದ್ರ ಚುನಾವಣಾ ಆಯುಕ್ತ ಸುನೀಲ್ ಆರೋರಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಭರ್ಜರಿ ಜಯಗಳಿಸಿದ ನಂತರ ದೇಶದಲ್ಲಿ ನಡೆಯುತ್ತಿರುವ ರಾಜ್ಯಗಳ ಮೂರನೇ ವಿಧಾನಸಭಾ ಚುನಾವಣೆ ಇದಾಗಿದೆ. ಇದು ಬಿಜೆಪಿ ಆಡಳಿತವಿರುವ ಹರ್ಯಾಣ, ಮಹಾರಾಷ್ಟ್ರದಲ್ಲಿ ಈಗಾಗಲೇ ಚುನಾವಣೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next