Advertisement

Jharkhand Politics: ಮಾಜಿ ಸಿಎಂ ಚಂಪೈ ಸೊರೆನ್‌ರಿಂದ ಹೊಸ ಪಕ್ಷ ಸ್ಥಾಪನೆ?

08:04 PM Aug 21, 2024 | Team Udayavani |

ರಾಂಚಿ: ಸ್ವಪಕ್ಷ  ಜಾರ್ಖಂಡ್‌ ಮುಕ್ತಿ ಮೋರ್ಚಾ (JMM) ಬಗ್ಗೆ ತೀವ್ರ ಬೇಸರಗೊಂಡಿರುವ ಜಾರ್ಖಂಡ್‌ (Jharkhand) ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ (Champai Soren) ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುವರು ಎಂಬ ಬಗ್ಗೆ ವದಂತಿ ಕೇಳುತ್ತಿರುವ ಬೆನ್ನಲ್ಲೇ  ಹೊಸ ಪಕ್ಷ ಸ್ಥಾಪಿಸುವ ಬಗ್ಗೆ ಸುಳಿವು ನೀಡುವ ಜೊತೆಗೆ ಮುಂದಿನ ನಡೆ ಬಗೆಗಿನ ಸ್ಪಷ್ಟ ಚಿತ್ರಣ ಒಂದು ವಾರದಲ್ಲಿ ಸಿಗಲಿದೆ.

Advertisement

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಚಂಪೈ ಸೊರೆನ್‌ “ನಾನು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ, ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸುತ್ತಿದ್ದೇನೆ. ಹೊಸ ಸಂಘಟನೆಯ ಬಲಪಡಿಸುತ್ತೇನೆ ಹಾಗೂ ಉತ್ತಮ ಸ್ನೇಹಿತರು ದೊರಕಿದರೆ ಅವರ ಜೊತೆ ಮುಂದುವರಿದು ರಾಜ್ಯದ ಜನರ ಸೇವೆ ಮಾಡುತ್ತೇನೆ”  ಎಂದು ಹೇಳಿದ್ದಾರೆ.


ಕೆಲವು ದಿನಗಳ ಹಿಂದೆ ಎಕ್ಸ್‌ನಲ್ಲಿ ಬರೆದಿದ್ದ ಚಂಪೈ, ತಮ್ಮ ಮುಂದೆ ಮೂರು ಆಯ್ಕೆಗಳಿವೆ ಎಂದಿದ್ರು‌. ಭಾರವಾದ ಹೃದಯದಿಂದ, ನಾನು ಅದೇ ಶಾಸಕಾಂಗ ಪಕ್ಷದ ಸಭೆಯಲ್ಲಿ “  ರಾಜಕೀಯ ಜೀವನದ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ಹೇಳಿದ್ದೆ. ಇದರಲ್ಲಿ ನನಗೆ ಮೂರು ಆಯ್ಕೆಗಳಿವೆ, ಮೊದಲನೆಯದಾಗಿ, ರಾಜಕೀಯದಿಂದ ನಿವೃತ್ತಿ, ಎರಡನೆಯದು, ನನ್ನದೇ ಆದ ಪ್ರತ್ಯೇಕ ಸಂಘಟನೆ ಸ್ಥಾಪನೆ ಮತ್ತು ಮೂರನೆಯದಾಗಿ, ರಾಜಕೀಯವಾಗಿ ಮತ್ತೊಬ್ಬ ಜೊತೆಗಾರನ ಹುಡುಕಿಕೊಳ್ಳುವುದು (ಪರೋಕ್ಷವಾಗಿ ಬಿಜೆಪಿ ಸೇರ್ಪಡೆ)  ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆವರೆಗೆ ಈ ಪ್ರಯಾಣದಲ್ಲಿ ನನಗೆ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ ಎಂದು ಬರೆದಿದ್ದರು.

ನಾನು ಒಳಗೊಳಗೇ ಒಡೆದು ಚೂರಾಗಿದ್ದೇನೆ. ಏನು ಮಾಡಬೇಕೆಂದು ನನಗೆ ಅರ್ಥವಾಗಲಿಲ್ಲ. ಎರಡು ದಿನಗಳ ಕಾಲ ನಾನು ಶಾಂತವಾಗಿ ಕುಳಿತು ಆತ್ಮಾವಲೋಕನ ಮಾಡಿಕೊಂಡೆ, ಇಡೀ ಘಟನೆಯಲ್ಲಿ ನನ್ನ ತಪ್ಪನ್ನು ಹುಡುಕುತ್ತಲೇ ಇದ್ದೆ. ನನಗೆ ಅಧಿಕಾರದ ದುರಾಸೆ ಸ್ವಲ್ಪವೂ ಇರಲಿಲ್ಲ, ಆದರೆ ನನ್ನ ಸ್ವಾಭಿಮಾನಕ್ಕೆ ಈ ಹೊಡೆತ ಬಿದ್ದಿದೆ. ನನ್ನ ಸ್ವಂತ ಜನರು ಉಂಟುಮಾಡಿದ ನೋವನ್ನು ನಾನು ಎಲ್ಲಿ ವ್ಯಕ್ತಪಡಿಸಬಹುದು?” ಎಂದು ಚಂಪೈ ಸೊರೆನ್ ಪೋಸ್ಟ್‌ನಲ್ಲಿ ತಿಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next