Advertisement

Jharkhand: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಡಿಸಿ-ಎಸ್ಪಿ ಕಚೇರಿಯ ಇಬ್ಬರು ಚಾಲಕರು ಅರೆಸ್ಟ್

10:50 AM Dec 29, 2023 | Team Udayavani |

ರಾಂಚಿ: ಮಹಿಳೆಯೊಬ್ಬರ ಮೇಲೆ ಇಬ್ಬರು ಹಿರಿಯ ಅಧಿಕಾರಿಗಳ ಕಾರು ಚಾಲಕರು ಅತ್ಯಾಚಾರವೆಸಗಿದ ಘಟನೆ ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಅಧಿಕಾರಿಗಳ ಇಬ್ಬರನ್ನು ಕಾರು ಚಾಲಕರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ಪಲಾಮು ಡೆಪ್ಯೂಟಿ ಕಮಿಷನರ್ ಅವರ ಬೆಂಗಾವಲು ವಾಹನದಲ್ಲಿದ್ದ ಚಾಲಕ ಧರ್ಮೇಂದ್ರ ಕುಮಾರ್ (30) ಮತ್ತು ಪಲಾಮು ಪೊಲೀಸ್ ಅಧೀಕ್ಷಕರ ನಿವಾಸದ ಚಾಲಕ ಪ್ರಕಾಶ್ ಕುಮಾರ್ (40) ಎಂದು ಗುರುತಿಸಲಾಗಿದೆ.

ಗುರುವಾರ (ಡಿಸೆಂಬರ್ 28) ಬೆಳಿಗ್ಗೆ ಮಹಿಳೆ ದಾಲ್ತೋಂಗಂಜ್ ರೈಲ್ವೆ ನಿಲ್ದಾಣದಿಂದ ಹೊರಟು ಮೊಬೈಲ್ ರೀಚಾರ್ಜ್ ಅಂಗಡಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಹಿಳೆಯ ಮೊಬೈಲ್ ಫೋನ್ ರೀಚಾರ್ಜ್ ಮಾಡುವ ನೆಪದಲ್ಲಿ ಚಾಲಕರಿಬ್ಬರು ಮಹಿಳೆಯೊಂದಿಗೆ ಮಾತಿನ ಚಕಮಕಿ ನಡೆಸಿ ಆಕೆಯನ್ನು ಬಲವಂತವಾಗಿ ನಿವಾಸಿಗಳ ವಸತಿಗೃಹಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಇಬ್ಬರೂ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಮತ್ತು ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆಕೆಯ ದೂರಿನಲ್ಲಿ ತಿಳಿಸಲಾಗಿದೆ.

Advertisement

ಘಟನೆಗೆ ಸಂಬಂಧಿಸಿ ಮಹಿಳೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎರಡು ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ.

ಪಲಾಮು ಎಸ್ಪಿ ರಿಷ್ಮಾ ರಮೇಶನ್ ಘಟನೆಯನ್ನು ದೃಢಪಡಿಸಿದ್ದಾರೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಆರೋಪಿ ಮತ್ತು ಮಹಿಳೆಯನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದ್ದು ವೈದ್ಯಕೀಯ ಪರೀಕ್ಷೆ ವರದಿ ಆದರಿಸಿ ಹೆಚ್ಚಿನ ತನಿಖೆ ನಡೆಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Gaza mother: ಯುದ್ಧ ಪೀಡಿತ ಪ್ರದೇಶದಿಂದ 5km ನಡೆದು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

Advertisement

Udayavani is now on Telegram. Click here to join our channel and stay updated with the latest news.

Next