Advertisement

ಎಚ್‌ಐವಿ ಪೀಡಿತರಿಗೆ ಆತ್ಮಸ್ಥೈರ್ಯ ಅಗತ್ಯ

04:40 PM Dec 02, 2018 | Team Udayavani |

ಚಿಕ್ಕೋಡಿ: ಎಚ್‌ಐವಿ ಪೀಡಿತರನ್ನು ಸಮಾಜದಲ್ಲಿ ಸಾಮಾನ್ಯ ಜನರಂತೆ ನೋಡಿದಾಗ ಅವರಲ್ಲಿಯೂ ಆತ್ಮಸ್ಥೈರ್ಯ ಬೆಳೆಯುತ್ತದೆ. ಅವರಿಗೆ ಸಮಾಜದಲ್ಲಿ ಅನುಕಂಪಕ್ಕಿಂತ ಅವಕಾಶ ನೀಡುವುದು ಮುಖ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ವಿ.ವಿ. ಶಿಂಧೆ ಹೇಳಿದರು.

Advertisement

ಶನಿವಾರ ನಗರದಲ್ಲಿ ಪುರಸಭೆ, ಆರೋಗ್ಯ ಇಲಾಖೆ ಹಾಗೂ ಹಲವಾರು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, 10 ವರ್ಷಗಳ ಅಂಕಿ ಅಂಶಗಳನ್ನು ನೋಡಿದಾಗ ಎಚ್‌ಐವಿ ಸೋಂಕಿನಿಂದ ಬಳಲುವರ ಸಂಖ್ಯೆ ಗಣನೀಯ ಇಳಿಕೆ ಕಂಡಿದೆ. ಆರೋಗ್ಯ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಜತೆಗೂಡಿ ಜನರಲ್ಲಿ ಬೀದಿ ನಾಟಕ, ಆರೋಗ್ಯ ಶಿಬಿರದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಮಹಾಂತಪ್ಪ ಎ.ಡಿ. ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಾಗೃತಿ ಜಾಥಾದಲ್ಲಿ ಪಟ್ಟಣದ ಎಲ್ಲ ಶಾಲಾ ಬಾಲಕರು, ಬಾಲಕಿಯರು, ಎನ್‌ .ಸಿ.ಸಿ ಕೆಡೆಟ್‌ಗಳು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿತು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಪಿ.ಬಿ. ದೇವಮಾನೆ, ಪಿಎಸ್‌ಐ ಸಂಗಮೇಶ ಹೊಸಮನಿ, ಡಾ| ವಿವೇಕ ಹೊನ್ನಳ್ಳಿ, ಡಾ|ಲಕ್ಷ್ಮೀಕಾಂತ ಕಡ್ಲೇಪಗೋಳ, ಶ್ರೀನಿವಾಸ ನಾಯಿಕ, ಸಂಜು ಕುಲಕರ್ಣಿ, ಸಿಟಿಇ ಸಂಸ್ಥೆಯ ಕಾರ್ಯದರ್ಶಿ ಎಸ್‌.ಜಿ. ಜಹಾಗೀರದಾರ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next