Advertisement
ಉಮ್ಮತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ವಿವಿಧ ಸಮಸ್ಯೆ, ಕುಂದು ಕೊರತೆಗಳನ್ನು ಗಮನಕ್ಕೆ ತಂದರಿಸುವಂತೆ ಮನವಿ ಮಾಡಿದರು.
Related Articles
Advertisement
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಜನರಿಂದ ಸಮಸ್ಯೆ ಪ್ರಸ್ತಾಪವಾಗುತ್ತಿದ್ದಂತೆಯೇ ಕೂಡಲೇ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿ ಕ್ರಮ ವಹಿಸುವಂತೆ ತಿಳಿಸಿದರು.
ಸ್ಥಳೀಯ ಕುಂದು ಕೊರತೆಗಳನ್ನು ಬಗೆಹರಿಸ ಬೇಕು: ಎಲ್ಲರ ಮನವಿಗೆ ಉತ್ತರಿಸಿ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ. ಸಂಬಂಧಪಟ್ಟ ಇಲಾಖೆಗಳು ಪಟ್ಟಿ ಮಾಡಿಕೊಂಡು ಪರಿಹರಿಸುವ ನಿಟ್ಟಿನಲ್ಲಿ ಮುಂದಾಗಲಿ ದ್ದಾರೆ ಎಂದು ತಿಳಿಸಿದರು.
ತಾಲೂಕು ಹಂತದ ಅಧಿಕಾರಿಗಳು ಆಯಾ ಭಾಗದ ಸಮಸ್ಯೆಗಳನ್ನು ಅಲ್ಲಿಯೇ ಸಮರ್ಪಕವಾಗಿ ಪರಿಹರಿಸಿದರೆ ಮೇಲಿನ ಹಂತದವರೆಗೆ ದೂರು ಬರುವುದಿಲ್ಲ. ಹೀಗಾಗಿ ಸ್ಥಳೀಯ ಕುಂದು ಕೊರತೆಗಳನ್ನು ಬಗೆಹರಿಸಬೇಕು. ಯಾವುದೇ ತೊಂದರೆ ಇರಲಿ ಅದಕ್ಕೆ ಸ್ಪಂದಿಸಿ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಆರಂಭದಲ್ಲಿ ದೀಪ ಬೆಳಗಿಸುವ ಮೂಲಕ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಚಾಲನೆ ನೀಡಿದರು. ಕಂದಾಯ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಮಾಸಾಶನ, ವಿಧವಾ ವೇತನ, ಮನಸ್ವಿನಿ ಯೋಜನೆ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಸವಲತ್ತುಗಳ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯವರನ್ನು ಮಕ್ಕಳು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು. ಮಂಗಳವಾದ್ಯ, ಎತ್ತಿನಗಾಡಿ ಮೆರವಣಿಗೆ ಸಹ ಏರ್ಪಾಡು ಮಾಡಲಾಗಿತ್ತು. ಶಾಲಾ ಆವರಣದಲ್ಲಿ ಏರ್ಪಾಡಾಗಿದ್ದ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿಯವರು ಭೇಟಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಪೋಷಣಾ ಮಾಸಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೌಷ್ಠಿಕ ಆಹಾರ ಪದಾರ್ಥಗಳ ಪ್ರದರ್ಶನ, ಇತರೆ ಜಾಗೃತಿ ಪ್ರದರ್ಶನ ಉದ್ಘಾಟಿಸಿ ವೀಕ್ಷಿಸಿದರು. ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಚಂದ್ರಮ್ಮ, ತಹಶೀಲ್ದಾರ್ ಬಸವರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಪೊ›ಬೆಷನರಿ ತಹಶೀಲ್ದಾರ್ ರೇಷ್ಮಾ ಗೌರವ್, ಭೂ ದಾಖಲೆಗಳ ಉಪನಿರ್ದೇಶಕಿ ವಿದ್ಯಾಯಿನಿ ಇತರರು ಇದ್ದರು.
ಉಮ್ಮತ್ತೂರು : ವಿವಿಧೆಡೆ ಜಿಲ್ಲಾಧಿಕಾರಿ ಭೇಟಿ :
ಚಾಮರಾಜನಗರ: ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಉಮ್ಮತ್ತೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ಆಸ್ಪತ್ರೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವಾಲಯ ಗಳಿಗೆ ಭೇಟಿ ನೀಡಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು.
ಮಕ್ಕಳಿಗೆ ಭವಿಷ್ಯದಲ್ಲಿ ಏನಾಗಬೇಕೆಂದು ಬಯಸಿದ್ದೀರ ಎಂದು ಪ್ರಶ್ನಿಸಿದರು. ವಿದ್ಯಾರ್ಥಿಗಳು ಶ್ರಮವಹಿಸಿದರೆ ಅದೃಷ್ಟ ಒಲಿಯುತ್ತದೆ. ಆತ್ಮ ವಿಶ್ವಾಸ ರೂಢಿಸಿಕೊಂಡರೆ ಅಗಾಧ ಸಾಧನೆ ಮಾಡಬಹುದು ಎಂದು ಸಲಹೆ ಮಾಡಿದರು. ಉಮ್ಮತ್ತೂರು ಕೆರೆ ವೀಕ್ಷಣೆ ಮಾಡಿದರು. ಹತ್ತಿರದಲ್ಲಿಯೇ ಇದ್ದ ಮಿಲಿಟರಿ ಕ್ಯಾಂಪ್ ಗೆ ಜಿಲ್ಲಾಧಿಕಾರಿಯವರು ಭೇಟಿ ನೀಡಿದರು.