Advertisement
ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಹೊಳೆ ನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿ ಮೆಣಗನಹಳ್ಳಿಯಲ್ಲಿ ಶನಿವಾರ ವಾಸ್ತವ್ಯ ಹೂಡಿದ್ದ ಜಿಲ್ಲಾಧಿಕಾರಿ ರೈತರಿಂದ ಹಾಗೂ ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ಗ್ರಾಮಕ್ಕೆ ರಸ್ತೆ, ಬಸ್ ಸಂಚಾರ ದ ವ್ಯವಸ್ಥೆ, ಶಾಲಾ ಕಟ್ಟಡ ನಿರ್ಮಾಣ, ಕುಡಿಯುವ ನೀರು ಇನ್ನಿತರ ಮೂಲಭೂತ ಸೌಲಭ್ಯ ಶೀಘ್ರವೇ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ಜಿಲ್ಲಾಡಳಿತದಿಂದ ಸಮಸ್ಯೆಗಳಿಗೆ ಮುಕ್ತಿ: ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಎ.ಟಿ. ರಾಮಸ್ವಾಮಿ ಅವರು, ಸರ್ಕಾರದ ಎಲ್ಲ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ಒದಗಿಸುವ, ಜನರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ. ರೈತರಿಗೆ ಉತ್ತಮ ಬದುಕು ಕಟ್ಟಿಕೊಡಲು ಸರ್ಕಾರ ಸಹಕಾರ ಇದ್ದೇ ಇರುತ್ತದೆ ಎಂದರು.
ಜಿಲ್ಲಾಡಳಿತವು ಯಾವುದೇ ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲದು. ಎಲ್ಲ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಸಿದರೆ ಮಾತ್ರ ಜನಸಾಮಾನ್ಯರು ಅಭಿವೃದ್ಧಿ ಆಗಲು ಸಾಧ್ಯ. ಮೆಣಗನಹಳ್ಳಿ ದೇವಸ್ಥಾನದ ಅಭಿವೃದ್ಧಿಗೆ 2 ಲಕ್ಷ ರೂ. ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ, ಮಾಸಾಶನ ಮಂಜೂರಾತಿ ಆದೇಶ ಪ್ರತಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾರಾಜರಾಂ. ಜಿಪಂ ಉಪಕಾರ್ಯದರ್ಶಿ ಚಂದ್ರಶೇಖರ್, ಉಪಭಾಗಾಧಿಕಾರಿ ಬಿ.ಎ. ಜಗದೀಶ್, ಕೃಷಿ ಉಪನಿರ್ದೇಶಕ ಭಾನು ಪ್ರಕಾಶ್, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಯೋಗೇಶ್, ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕಿ ಹೇಮಲತಾ, ತಹಶೀಲ್ದಾರ್ ಕೆ.ಕೃಷ್ಣಮೂರ್ತಿ, ತಾಪಂ ಕಾರ್ಯ ನಿರ್ವಾಣಾಧಿಕಾರಿ ಯೋಗೇಶ್, ಗ್ರಾಪಂ ಅಧ್ಯಕ್ಷೆ ಶಿವಮ್ಮ ಮತ್ತಿತರ ಇಲಾಖೆ ಅಧಿಕಾರಿಗಳು ಹಾಜರಿದ್ದರು.