Advertisement
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, ಜಿಂದಾಲ್ ನಿಂದ 20 ಕೋಟಿ ರೂ. ಅನ್ನು ಚೆಕ್ ಮೂಲಕ ಪಡೆದಿದ್ದನ್ನು ನಾನೇ ಬಹಿರಂಗಪಡಿಸಿದ್ದೆ ಎಂದು ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
Related Articles
Advertisement
ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡದಿರುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅವರು ತೀರ್ಮಾನ ಮಾಡುವುದೂ ಇಲ್ಲ ಎಂದೂ ಹೇಳಿದ್ದಾರೆ. ಇದೇ ಕಾರಣಕ್ಕಾಗಿಯೇ ಅವರು, ನಾವು ವಾರದ ಹಿಂದೆಯೇ ಪ್ರತಿಭಟನೆಗೆ ನಿರ್ಧರಿಸಿದ್ದರೂ, ಸಂಧಾನಕ್ಕೆ ಕರೆಯಲಿಲ್ಲ. ಆದರೆ, ಅಹೋರಾತ್ರಿ ಧರಣಿ ಮುಗಿಸಿ ಮೆರವಣಿಗೆ ಹೊರಡುವಾಗ ಮಾತುಕತೆಯ ನಾಟಕವಾಡಿದರು ಎಂದು ವ್ಯಂಗ್ಯವಾಡಿದರು. ಈಗ ನನ್ನ ಮೇಲೆ ದೂರುವುದು ಸರಿಯಲ್ಲ ಎಂದು ಬಿಎಸ್‌ವೈ ಹೇಳಿದರು.
ಜಿಂದಾಲ್ ಗೆ ಜಮೀನು ಮಾರಾಟ ಮಾಡುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡುವಂತೆ ನಾನೇ ಸಲಹೆ ನೀಡಿದ್ದೆ. ನಾನು ಸರ್ಕಾರದ ಭಾಗ ಆಗಿರದ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತನಾಡಿಲ್ಲ.-ಸಿದ್ದರಾಮಯ್ಯ, ಮಾಜಿ ಸಿಎಂ
ಜಿಂದಾಲ್ ನಿಂದ 20 ಕೋಟಿ ರೂ. ಕಿಕ್‌ಬ್ಯಾಕ್ ಅನ್ನು ಚೆಕ್ ಮೂಲಕ ಯಡಿಯೂರಪ್ಪ ಪಡೆದಿದ್ದನ್ನು ನಾನೇ ಬಹಿರಂಗ ಪಡಿಸಿದ್ದೆ. ಇದನ್ನು ಮರೆತಿರುವ ಅವರು ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ.
-ಎಚ್.ಡಿ.ಕುಮಾರಸ್ವಾಮಿ, ಸಿಎಂ
-ಎಚ್.ಡಿ.ಕುಮಾರಸ್ವಾಮಿ, ಸಿಎಂ