Advertisement

ಚಾ.ನಗರ ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಈಗ Jio True 5G ಲಭ್ಯ

09:38 AM Jun 15, 2023 | Team Udayavani |

ಚಾಮರಾಜನಗರ: ರಿಲಯನ್ಸ್ ಜಿಯೋ ಟ್ರೂ 5ಜಿ ಈಗ ಚಾಮರಾಜನಗರ ಸೇರಿದಂತೆ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, 250ಕ್ಕೂ ಹೆಚ್ಚು ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ಲಭ್ಯವಿದೆ.

Advertisement

ಅಲ್ಲದೆ, ಈ ನಗರಗಳು ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ನೂರಾರು ಹಳ್ಳಿಗಳು ಸಹ ಈಗ ಜಿಯೋ ಟ್ರೂ 5ಜಿ ಪ್ರಯೋಜನಗಳನ್ನು ಪಡೆಯುವುದಕ್ಕೆ ಸಾಧ್ಯವಾಗುತ್ತದೆ ಎಂದು ಜಿಯೋ ಪ್ರಕಟಣೆ ತಿಳಿಸಿದೆ.

ಈ ಎಲ್ಲ ನಗರಗಳು, ಪಟ್ಟಣಗಳು ಮತ್ತು ಹಳ್ಳಿಗಳಲ್ಲಿನ ಜಿಯೋ ಬಳಕೆದಾರರನ್ನು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಪಡೆಯಬಹುದಾಗಿದೆ.

ಎಲ್ಲ ಪ್ರಮುಖ ಸ್ಥಳಗಳು, ಪ್ರವಾಸಿ ತಾಣಗಳು, ಶಿಕ್ಷಣ ಸಂಸ್ಥೆಗಳು, ಮಾಲ್‌ಗಳು ಮತ್ತು ಮಾರುಕಟ್ಟೆಗಳು, ವಸತಿ ಪ್ರದೇಶಗಳು, ಆಸ್ಪತ್ರೆಗಳು, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು, ಸರ್ಕಾರಿ ಕಟ್ಟಡಗಳು ಹಾಗೂ ಈ ಎಲ್ಲ ಪ್ರದೇಶಗಳಲ್ಲಿನ ಇತರ ಪ್ರಮುಖ ವಾಣಿಜ್ಯ ಸಂಸ್ಥೆಗಳಲ್ಲೂ ಜಿಯೋ 5ಜಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಸೇರಿದಂತೆ ಜಿಲ್ಲಾ ಕೇಂದ್ರಗಳು ಮತ್ತು ಕರ್ನಾಟಕದಾದ್ಯಂತ 250ಕ್ಕೂ ಹೆಚ್ಚು ಪ್ರಮುಖ ನಗರಗಳು ಹಾಗೂ ಪಟ್ಟಣಗಳಲ್ಲಿ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸಿದ ಮೊದಲ ಸೇವಾ ಪೂರೈಕೆದಾರ ಜಿಯೋ ಆಗಿದೆ.

Advertisement

ಈ ಬಗ್ಗೆ ಮಾತನಾಡಿದ ಜಿಯೋ ವಕ್ತಾರರು, ಚಾಮರಾಜನಗರ ಸೇರಿ ಕರ್ನಾಟಕದ ಜಿಲ್ಲಾ ಕೇಂದ್ರಗಳು, 250ಕ್ಕೂ ಹೆಚ್ಚು ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳ ಲಭ್ಯತೆಯನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ. ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ, ಉತ್ಪಾದನೆ, ಎಸ್ ಎಂಇಗಳು, ಇ-ಆಡಳಿತ, ಕೃಷಿ, ಆಟೊಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್ ಮತ್ತು ಐಟಿ ಕ್ಷೇತ್ರಗಳ ಬೆಳವಣಿಗೆಗೆ ಜಿಯೋ 5ಜಿ ಪೂರಕವಾಗಿದೆ ಎಂದು ತಿಳಿಸಿದ್ದಾರೆ.

2023ರ ಡಿಸೆಂಬರ್ ಅಂತ್ಯದ ವೇಳೆಗೆ ದೇಶದ ಪ್ರತಿ ಪಟ್ಟಣ ಮತ್ತು ತಾಲೂಕುಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸಲು ಜಿಯೋ ಯೋಜಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next