ನವದೆಹಲಿ:ಕಾಂಗ್ರೆಸ್ ಹಿರಿಯ ಮುಖಂಡ, ರಾಹುಲ್ ಗಾಂಧಿ ಆಪ್ತ ಜಿತಿನ್ ಪ್ರಸಾದ್ ಅವರು ಬುಧವಾರ(ಜೂನ್ 09) ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡಿದ್ದು, ಇದರಿಂದ ಕಾಂಗ್ರೆಸ್ ಪಕ್ಷ ಮತ್ತೊಂದು ದೊಡ್ಡ ಹಿನ್ನಡೆ ಅನುಭವಿಸಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಇಂಟರ್ನೆಟ್ ಸಹಾಯ ಇಲ್ಲದೆ ಗೂಗಲ್ ಮ್ಯಾಪ್ ಬಳಸುವುದು ಹೇಗೆ ?
ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಹಾಗೂ ಬಿಜೆಪಿ ಇತರ ಮುಖಂಡರ ಸಮ್ಮುಖದಲ್ಲಿ ಜಿತಿನ್ ಪ್ರಸಾದ್ ಔಪಚಾರಿಕವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ವರದಿ ವಿವರಿಸಿದೆ.
ಭಾರತೀಯ ಜನತಾ ಪಕ್ಷದ ಮೂಲಗಳ ಪ್ರಕಾರ, 2022ರ ವಿಧಾನಸಭಾ ಚುನಾವಣೆಯಲ್ಲಿ ಜಿತಿನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ನಂತರ 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರಿಗೆ ಪ್ರಮುಖ ಹೊಣೆಗಾರಿಕೆ ಕೊಡುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನ ಉತ್ತರಪ್ರದೇಶದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಲಕ್ನೋದಲ್ಲಿ ಬಿಜೆಪಿ ಹಿರಿಯ ಮುಖಂಡ ರಾಜನಾಥ್ ಸಿಂಗ್ ವಿರುದ್ಧ ಜನಪ್ರಿಯ ಬ್ರಾಹ್ಮಣ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದರು. ಆದರೂ ಜಿತಿನ್ ಪ್ರಸಾದ್ ಸವಾಲನ್ನು ಸ್ವೀಕರಿಸಲು ಹಿಂಜರಿಯಲಿಲ್ಲ. ಮೂಲಗಳ ಪ್ರಕಾರ, ಜಿತಿನ್ ಅವರು ತಮ್ಮ ಸಾಂಪ್ರದಾಯಿಕ ಕ್ಷೇತ್ರವಾದ ದೌರಾರಾದಲ್ಲಿ ಸ್ಪರ್ಧಿಸಲು ಯಾವುದೇ ಸಮಸ್ಯೆ ಇಲ್ಲವಾಗಿತ್ತು. ಆದರೂ ಲಕ್ನೋಗೆ ಸ್ಥಳಾಂತರಗೊಳ್ಳುವ ಬಗ್ಗೆ ಜಿತಿನ್ ಪ್ರಸಾದ್ ಯಾವುದೇ ಅಳುಕಿಲ್ಲದೆ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ಹೇಳಿದೆ.