Advertisement

ಮೂರು ವರ್ಷಗಳಲ್ಲಿ 733 ಉಗ್ರರ ಹತ್ಯೆ

01:30 AM Jun 26, 2019 | Team Udayavani |

ನವದೆಹಲಿ: ಭಯೋತ್ಪಾದಕರನ್ನು ಮಟ್ಟ ಹಾಕಲು ಪಣ ತೊಟ್ಟಿರುವ ಕೇಂದ್ರ ಸರ್ಕಾರವು ಕಳೆದ 3 ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 700ಕ್ಕೂ ಅಧಿಕ ಭಯೋತ್ಪಾದಕರನ್ನು ಹೊಡೆದುರುಳಿಸಿದೆ.

Advertisement

ಹೀಗೆಂದು ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದೆ. ಪ್ರಸಕ್ತ ವರ್ಷದ ಜನವರಿಯಿಂದ ಜೂನ್‌ವರೆಗಿನ ಅವಧಿಯಲ್ಲಿ ಒಟ್ಟು 113 ಉಗ್ರರನ್ನು ಮಟ್ಟಹಾಕಲಾಗಿದೆ. 2018ರಲ್ಲಿ 257 ಉಗ್ರರು, 2017ರಲ್ಲಿ 213 ಮತ್ತು 2016ರಲ್ಲಿ 150 ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ. ಈ ಮೂಲಕ 3 ವರ್ಷಗಳಲ್ಲಿ ಒಟ್ಟು 733 ಉಗ್ರರನ್ನು ಸದೆಬಡಿದಂತಾಗಿದೆ ಎಂದು ಗೃಹ ಇಲಾಖೆ ತಿಳಿಸಿದೆ. ಇದೇ ವೇಳೆ, ಈ ಅವಧಿಯಲ್ಲಿ ಒಟ್ಟು 112 ನಾಗರಿಕರು ಕೂಡ ಅಸುನೀಗಿದ್ದಾರೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಜಿ. ಕಿಶನ್‌ ರೆಡ್ಡಿ ಹೇಳಿದ್ದಾರೆ.

ಐಸಿಸ್‌ ನಂಟು: 155 ಮಂದಿ ಸೆರೆ
ನಿಷೇಧಿತ ಇಸ್ಲಾಮಿಕ್‌ ಸ್ಟೇಟ್(ಐಸಿಸ್‌) ಉಗ್ರ ಸಂಘಟನೆಯ ಸದಸ್ಯರು ಹಾಗೂ ಆ ಸಂಘಟನೆ ಬಗ್ಗೆ ಮೃದು ಧೋರಣೆ ಹೊಂದಿರುವ ಒಟ್ಟು 155 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ ಎಂದೂ ಗೃಹ ಸಚಿವಾಲಯ ಮಾಹಿತಿ ನೀಡಿದೆ. ಐಸಿಸ್‌ ಉಗ್ರ ಸಂಘಟನೆಯು ತನ್ನ ಸಿದ್ಧಾಂತವನ್ನು ಪ್ರಚುರಪಡಿಸಲು ವಿವಿಧ ಇಂಟರ್ನೆಟ್-ಆಧರಿತ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿದೆ. ಇದರ ಬಗ್ಗೆ ಭದ್ರತಾ ಸಂಸ್ಥೆಗಳು ನಿಗಾ ಇಟ್ಟಿವೆ ಎಂದೂ ಕಿಶನ್‌ ರೆಡ್ಡಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next