ಶ್ರೀನಗರ: ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಮಂಗಳವಾರ ಸಂಜೆ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಸೇನಾ ಕರ್ನಲ್ ಸೇರಿದಂತೆ ಮೂವರು ಭದ್ರತಾ ಪಡೆಯ ಅಧಿಕಾರಿಗಳು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಉಪ ಅಧೀಕ್ಷಕ ಹುಮಾಯೂನ್ ಭಟ್ ಅವರು ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡು ನಂತರ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ : Army Dog: ಸೈನಿಕನ ಪ್ರಾಣ ರಕ್ಷಿಸಿ ಎನ್ ಕೌಂಟರ್ ಗೆ ಬಲಿಯಾದ ಸೇನೆಯ ಶ್ವಾನ
ಗಡೋಲ್ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಆದರೆ ರಾತ್ರಿ ಹಿಂತೆಗೆದುಕೊಳ್ಳಲಾಯಿತು. ಬುಧವಾರ ಬೆಳಗ್ಗೆ, ಉಗ್ರರು ಅಡಗುತಾಣದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿಯ ನಂತರ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಂಡವನ್ನು ಮುನ್ನಡೆಸುತ್ತಿದ್ದ ಕರ್ನಲ್ ಸಿಂಗ್ ಮೇಲೆ ಉಗ್ರರ ದಾಳಿ ಮಾಡಿದ್ದು, ಉಗ್ರರ ಭಾರಿ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಹುತಾತ್ಮರಾಗಿದ್ದಾರೆ.