ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಸೋಪೋರ ಜಿಲ್ಲೆಯ ಡಾಂಗೆಪೋರಾ ಪ್ರದೇಶದಲ್ಲಿ ಉಗ್ರರು ನಡೆಸಿದ ದಾಳಿಯಿಂದಾಗಿ ಹೆಣ್ಣು ಮಗುವೊಂದು ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಉಗ್ರರು ಕರುಣೆಯೇ ಇಲ್ಲದಂತೆ ನಡೆಸಿದ ದಾಳಿಯಿಂದಾಗಿ ಉಸ್ಮಾ ಜಾನ್ ಎಂಬ ಮಗು ಸೇರಿದಂತೆ ನಾಲ್ವರು ಗಾಯಗೊಂಡಿರುವುದಾಗಿ ಜಮ್ಮು-ಕಾಶ್ಮೀರ ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿರುವುದಾಗಿ ಪೊಲೀಸ್ ವಕ್ತಾರರು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
Related Articles
ಆಗಸ್ಟ್ 29ರಂದು ಶ್ರೀನಗರದ ಪಾರೀಮ್ ಪೋರಾ ಪ್ರದೇಶದಲ್ಲಿ ಶಂಕಿತ ಉಗ್ರರು ದಾಳಿ ನಡೆಸಿದ ಪರಿಣಾಮ ಓರ್ವ ನಾಗರಿಕ ಗಾಯಗೊಂಡಿದ್ದರು.