Advertisement

ಕಾಶ್ಮೀರದ ಪಹಾರಿ ಸಮುದಾಯಕ್ಕೆ ಎಸ್‌ಟಿ ಮೀಸಲು ಸೌಲಭ್ಯ?

12:21 AM Oct 04, 2022 | Team Udayavani |

ಶ್ರೀನಗರ/ಜಮ್ಮು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೂರು ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರು ಸೋಮವಾರವೇ ಜಮ್ಮುವಿಗೆ ಆಗಮಿಸಿದ್ದಾರೆ.

Advertisement

ಮಂಗಳವಾರ ರಜೌರಿಯಲ್ಲಿ, ಬುಧವಾರ ಬಾರಾಮುಲ್ಲಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಾದ್ಯಂತ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಇರುವ ಪಹಾರಿ ಸಮುದಾಯಕ್ಕೆ ಎಸ್‌ಟಿ ಮಾನ್ಯತೆ ನೀಡುವ ಬಗ್ಗೆ ಕೇಂದ್ರ ಗೃಹ ಸಚಿವರು ಘೋಷಣೆ ಮಾಡುವ ಸಾಧ್ಯತೆಗಳು ಇವೆ. ಇದೇ ವಿಚಾರ ನ್ಯಾಶನಲ್‌ ಕಾನ್ಫರೆನ್ಸ್‌ ಪಕ್ಷದಲ್ಲಿ ಬಿರುಕು ಸೃಷ್ಟಿಸಿದೆ.

ಆ ಪಕ್ಷದ ನಾಯಕ ಕಫೀಲ್‌ ಉರ್‌ ರೆಹಮಾನ್‌ ಅವರು ರಜೌರಿ, ಬಾರಾಮುಲ್ಲಾದಲ್ಲಿ ಆಯೋಜಿಸಲಾಗಿರುವ ರ್‍ಯಾಲಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಜತೆಗೆ ರಜೌರಿಯಲ್ಲಿ ನ್ಯಾಶನಲ್‌ ಕಾನ್ಫರೆನ್ಸ್‌ ಪಕ್ಷದ ನಾಯಕರು ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next