Advertisement

ಜಮ್ಮು-ಕಾಶ್ಮೀರ ನೂತನ ಗವರ್ನರ್ ಮೇಲೆ ದಾಳಿಗೆ ಐಎಸ್ ಐ, ಉಗ್ರ ಸಂಘಟನೆ ಸಂಚು: ಗುಪ್ತಚರ ಇಲಾಖೆ

09:53 AM Nov 08, 2019 | Nagendra Trasi |

ನವದೆಹಲಿ:ಜಮ್ಮು-ಕಾಶ್ಮೀರದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಗಿರೀಶ್ ಚಂದ್ರ ಮುರ್ಮು ಅವರನ್ನು ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ(ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್) ಟಾರ್ಗೆಟ್ ಮಾಡಿರುವುದಾಗಿ ಗುಪ್ತಚರ ಇಲಾಖೆ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Advertisement

ವರದಿಯ ಪ್ರಕಾರ, ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಎ ತಯ್ಬಾ, ಹಿಜ್ಬುಲ್ ಮುಜಾಹಿದೀನ್ ಹಾಗೂ ಐಎಸ್ ಐ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಕೋಟ್ಲಿ ಪ್ರದೇಶದಲ್ಲಿ ಸಭೆ ನಡೆಸಿದ್ದು, ಜಮ್ಮು-ಕಾಶ್ಮೀರದ ನೂತನ ರಾಜ್ಯಪಾಲರ ಮೇಲೆ ದಾಳಿ ನಡೆಸುವ ಸಂಚು ರೂಪಿಸುತ್ತಿರುವುದಾಗಿ ವಿವರಿಸಿದೆ.

ಇದನ್ನೂ ಓದಿ : ಛತ್ತೀಸ್ ಗಢ್: ನಕ್ಸಲೀಯರ ದಾಳಿಯಲ್ಲಿ ಸಿಆರ್ ಪಿಎಫ್ ಯೋಧ ಹುತಾತ್ಮ

ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ನಡೆದ ಸ್ಥಳೀಯ (ಬ್ಲಾಕ್ ಡೆವಲಪ್ ಮೆಂಟ್ ಕೌನ್ಸಿಲ್) ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಭ್ಯರ್ಥಿಗಳ ಮೇಲೂ ಉಗ್ರರು ದೃಷ್ಟಿ ನೆಟ್ಟಿದ್ದಾರೆಂದು ವರದಿ ತಿಳಿಸಿದೆ.

ಜಮ್ಮು-ಕಾಶ್ಮೀರದ ನೂತನ ರಾಜ್ಯಪಾಲರು ಹಾಗೂ ಬಿಜೆಪಿಯ ಪ್ರಮುಖ ಮುಖಂಡರ ಮೇಲೆ ದಾಳಿ ನಡೆಸುವಂತೆ ಐಎಸ್ ಐ ಸೂಚನೆ ನೀಡಿದ್ದು, ಅದರಂತೆ ಲಷ್ಕರ್ ಮತ್ತು ಹಿಜ್ಬುಲ್ ಉಗ್ರರ ಪಟ್ಟಿಯಲ್ಲಿ ಇವರ ಹೆಸರು ಇದ್ದಿರುವುದಾಗಿ ಗುಪ್ತಚರ ಇಲಾಖೆ ಮೂಲಗಳು ಹೇಳಿವೆ.

Advertisement

ಅಕ್ಟೋಬರ್ 29ರಂದು ಕೋಟ್ಲಿ ಮದರಸಾದಲ್ಲಿ ಜೈಶ್ ಉಗ್ರಗಾಮಿ ಸಂಘಟನೆ ಆಯೋಜಿಸಿದ್ದ ಸಭೆಯಲ್ಲಿ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಗಳು ಭಾಗವಹಿಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next