Advertisement

ಸಂತೋಷ ಪಾಟೀಲ್ ಆತ್ಮಹತ್ಯೆ : ಉನ್ನತ ಮಟ್ಟದ ತನಿಖೆ ನಡೆಸಲು ಜೆಕೆ ಕೃಷ್ಣರೆಡ್ಡಿ ಆಗ್ರಹ

09:16 PM Apr 12, 2022 | Team Udayavani |

ಚಿಕ್ಕಬಳ್ಳಾಪುರ : ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಪಾಟೀಲ ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೇಲೆ ನೇರ ಆರೋಪ ಮಾಡಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ಮಾಜಿ ಉಪಸಭಾಪತಿ ಚಿಂತಾಮಣಿ ಕ್ಷೇತ್ರದ ಶಾಸಕ ಜೆಕೆ ಕೃಷ್ಣರೆಡ್ಡಿ ಒತ್ತಾಯಿಸಿದರು.

Advertisement

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿದೆ ಅದರ ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಸರ್ಕಾರ ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ ಒಂದು ವೇಳೆಯಲ್ಲಿ ತನಿಖಾ ಹಂತದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಪಾತ್ರ ಕಂಡುಬಂದರೆ ಕೂಡಲೇ ಅವರು ಸಚಿವ ಸ್ಥಾನದಿಂದ ರಾಜಿನಾಮೆ ನೀಡಬೇಕೆಂದು ಜೆಡಿಎಸ್ ಪಕ್ಷ ಆಗ್ರಹಿಸುತ್ತದೆ ಎಂದರು.

ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಸಚಿವರಾಗಿ ಅಧಿಕಾರ ಅನುಭವಿಸಿರುವ ನಾಯಕರು ಕಿರಿಯರಿಗೆ ಮಾರ್ಗದರ್ಶಕರಾಗಿರಬೇಕು ಮತ್ತು ಪಕ್ಷಕ್ಕೆ ಮತ್ತು ಮುಖಂಡರಿಗೆ ನಿಷ್ಠೆ ಆಗಿರಬೇಕು ಅದು ಹೊರತುಪಡಿಸಿ ಪಕ್ಷದ ನಾಯಕರ ವಿರುಧ್ಧಿ ಟೀಕಿಸುವುದು ಸೂಕ್ತವಲ್ಲ ಪಕ್ಷದ ನಾಯಕರ ವಿರುಧ್ಧ ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಶಿಸ್ತು ಕ್ರಮ ಜರುಗಿಸುವುದು ಬಹಳ ಸುಲಭ ಆದರೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನತಾ ಜರ್ನಾರ್ಧನ್ ಮತದಾರರು ಸೂಕ್ತ ಪಾಠ ಕಲಿಸುತ್ತಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ,ಗುಬ್ಬಿ ಶ್ರೀನಿವಾಸ್, ಕೋಲಾರದ ಶಾಸಕ ಕೆ.ಶ್ರೀನಿವಾಸ್‍ಗೌಡ ವಿರುಧ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : ಸಂತೋಷ್ ಆತ್ಮಹತ್ಯೆ ಪ್ರಕರಣ :ಮನೆಯವರು ಬಂದ ಬಳಿಕವೇ ಮಹಜರು ಪ್ರಕ್ರಿಯೆ :ಐಜಿಪಿ ದೇವಜ್ಯೋತಿ ರೇ

ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ನೀರಾವರಿ ಮತ್ತು ಕುಡಿಯಲು ಸುಧ್ಧ ನೀರು ಒದಗಿಸುವ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷವೂ ಜನತಾ ಜಲಧಾರೆ ಯಾತ್ರೆಯನ್ನು ಏಕಕಾಲಕ್ಕೆ 16 ಕಡೆಯಿಂದ ಆರಂಭವಾಗಲಿದ್ದು ಜಿಲ್ಲೆಯ ಗೌರಿಬಿದನೂರಿನಿಂದ ಯಾತ್ರೆಯನ್ನು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಒಂದು ಬಾರಿ ಜೆಡಿಎಸ್ ಪಕ್ಷಕ್ಕೆ ಅಧಿಕಾರ ನೀಡಬೇಕೆಂದು ರಾಜ್ಯದ ಜನರಿಗೆ ಮನವಿ ಮಾಡಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ.ಮುನೇಗೌಡ, ಜಿಪಂ ಮಾಜಿ ಅಧ್ಯಕ್ಷ ಗೌರಿಬಿದನೂರು ನರಸಿಂಹಮೂರ್ತಿ, ಮುಖಂಡರಾದ ಡಿ.ಜೆ. ನಾಗರಾಜರೆಡ್ಡಿ, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ, ಚಿಕ್ಕಬಳ್ಳಾಪುರ ತಾಲೂಕು ಅಧ್ಯಕ್ಷ ಕೆ.ಬಿ. ಮುನಿರಾಜು,ಮುಖಂಡರಾದ ಮುಕ್ತ ಮುನಿಯಪ್ಪ, ಜಿಪಂ ಮಾಜಿ ಸದಸ್ಯ ರಾಜಕಾಂತ್, ಕಿಸಾನ್ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next