ಜಮ್ಮು-ಕಾಶ್ಮೀರ: ಭದ್ರತಾ ಪಡೆಯ ಎನ್ ಕೌಂಟರ್ ಗೆ ಉಗ್ರನೊಬ್ಬ ಬಲಿಯಾಗಿರುವ ಘಟನೆ ಶುಕ್ರವಾರ(ನವೆಂಬರ್ 12) ಜಮ್ಮು-ಕಾಶ್ಮೀರದ ಕುಲ್ಗಾಮ್ ನ ಚಾವಲ್ ಗಮ್ ಪ್ರದೇಶದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಸಿರಿಯಾ; ಅಂದು ಹಿಂಸೆಯ ಜಾಗ, ಇಂದು ಪ್ರೇಮಿಗಳ ತಾಣ
ಕಾರ್ಯಾಚರಣೆ ಮುಂದುರಿದಿದ್ದು, ಎನ್ ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಎನ್ ಐ ವರದಿ ಮಾಡಿದೆ. ಮಂಗಳವಾರ(ನ.9) ಭದ್ರತಾ ಪಡೆಯ ಎರಡು ಪ್ರತ್ಯೇಕ ಕಾರ್ಯಾಚರಣೆ ವೇಳೆ ಐವರು ಉಗ್ರರು ಸಾವನ್ನಪ್ಪಿದ್ದರು.
ಚಾವಲ್ ಗಮ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದ ವೇಳೆ ಪ್ರತಿದಾಳಿಯಲ್ಲಿ ಉಗ್ರ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಸಾವನ್ನಪ್ಪಿರುವ ಉಗ್ರನ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ. ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.