Advertisement
ವರದಿಯ ಪ್ರಕಾರ, ಮೆಹ್ರಾಜಿದ್ದಿನ್ ಅವರನ್ನು ಭದ್ರತಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ ಎಂದು ವರದಿ ವಿವರಿಸಿದೆ.
ಜಮ್ಮು-ಕಾಶ್ಮೀರ್ ಸೋಪೋರ್ ಜಿಲ್ಲೆಯ ವಾಟರ್ ಗಾಮ್ ಮುನ್ಸಿಪಲ್ ಸಮಿತಿಯ ಉಪಾಧ್ಯಕ್ಷ, ಬಿಜೆಪಿ ಮುಖಂಡ ಮೆಹ್ರಾಜುದೀನ್ ಮಲ್ಲಾ ಅವರನ್ನು ಬುಧವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದು, ಮೆಹ್ರಾ ಅವರ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ವರದಿ ತಿಳಿಸಿತ್ತು. ಮೆಹ್ರಾಜುದೀನ್ ಅಪಹರಣವನ್ನು ಹಿರಿಯ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದು, ಮೆಹ್ರಾ ಅವರು ಮನೆ ಸಮೀಪದ ರಸ್ತೆ ಬಳಿ ನಿಂತಿದ್ದಾಗ ಬೆಳಗ್ಗೆ 8-30ರ ಹೊತ್ತಿಗೆ ಕೆಲವು ಅಪರಿಚಿತ ವ್ಯಕ್ತಿಗಳು ಆಗಮಿಸಿ ಬಲವಂತವಾಗಿ ಎಳೆದೊಯ್ದಿದ್ದು, ಈವರೆಗೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದರು.
Related Articles
Advertisement