Advertisement

Jammu-Kashmir: ಮುಂದುವರೆದ ಎನ್‌ಕೌಂಟರ್.. ಓರ್ವ ಯೋಧನಿಗೆ ಗಾಯ, ಉಗ್ರರ ರೇಖಾಚಿತ್ರ ಬಿಡುಗಡೆ

08:47 AM Jun 13, 2024 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮತ್ತೆ ಎನ್‌ಕೌಂಟರ್‌ ಮುಂದುವರೆದಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶ ನಡೆದ ನಾಲ್ಕನೇ ಎನ್‌ಕೌಂಟರ್ ಇದಾಗಿದ್ದು, ಜಮ್ಮುವಿನ ದೋಡಾ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ ಎಂದು ಹೇಳಲಾಗಿದೆ.

Advertisement

ಜೂನ್ 9 ರಂದು ರಿಯಾಸಿಯಲ್ಲಿ ಭಯೋತ್ಪಾದಕರು ಯಾತ್ರಾರ್ಥಿಗಳಿದ್ದ ಬಸ್ಸಿನ ಮೇಲೆ ದಾಳಿ ನಡೆಸಿದ್ದರು, ಇದರಲ್ಲಿ ಒಂಬತ್ತು ಜನರು ಸಾವನ್ನಪ್ಪಿದರು. ಇದಾದ ಬಳಿಕ ಕಥುವಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿತ್ತು, ಈತನ್ಮಧ್ಯೆ ಜಮ್ಮುವಿನ ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಮತ್ತೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ. ಘಟನೆ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದು ಭದ್ರತಾ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಭಲೇಸಾ ಗ್ರಾಮದ ದಟ್ಟ ಅರಣ್ಯ ಪ್ರದೇಶವಾದ ಕೋಟಾ ಟಾಪ್ ಪ್ರದೇಶದಲ್ಲಿ ರಾತ್ರಿ 7:40 ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಎನ್‌ಕೌಂಟರ್ ನಡೆಯುತ್ತಿದೆ, ಭಯೋತ್ಪಾದಕರ ಪತ್ತೆಗೆ ಕಾರ್ಡನ್ ಕಾರ್ಯಾಚರಣೆಗಳನ್ನು ಬಲಪಡಿಸಲು ಹೆಚ್ಚಿನ ಭದ್ರತಾ ಸಿಬಂದಿಗಳನ್ನು ನಿಯೋಜಿಸಲಾಗಿದ್ದು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಉಗ್ರರ ಮಾಹಿತಿ ನೀಡಿದವರಿಗೆ ಬಹುಮಾನ:

ಜಮ್ಮು ಮತ್ತು ಕಾಶ್ಮೀರ ಪೊಲೀಸರು ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ ಭಾಗಿಯಾಗಿರುವ ನಾಲ್ವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದು ಅವರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನವನ್ನು ಘೋಷಿಸಿದ್ದಾರೆ. ಪ್ರತಿ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನವನ್ನೂ ಘೋಷಿಸಲಾಗಿದೆ.

Advertisement

ಇದನ್ನೂ ಓದಿ: ಪ್ರಧಾನಮಂತ್ರಿ ಫ‌ಸಲ್‌ ವಿಮಾ ಯೋಜನೆ; ಭತ್ತ ಬೆಳೆಯುವ ರೈತರು ನೋಂದಾಯಿಸಲು ಸೂಚನೆ

Advertisement

Udayavani is now on Telegram. Click here to join our channel and stay updated with the latest news.

Next