Advertisement

JN-1; ರಾಮನಗರ: ಒಂದೇ ಗ್ರಾಮದ ಇಬ್ಬರಿಗೆ ಕೋವಿಡ್ ಪಾಸಿಟಿವ್

03:54 PM Dec 20, 2023 | Team Udayavani |

ರಾಮನಗರ: ರೇಷ್ಮೆನಗರಕ್ಕೆ ಕೊರೊನಾ ಕಾಲಿಟ್ಟಿದ್ದು,  ಒಂದೇ ಗ್ರಾಮದ ಇಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದೆ.

Advertisement

ಜಿಲ್ಲೆಯಲ್ಲಿ ನಿನ್ನೆಯಿಂದ ಒಟ್ಟು ಎರಡು ಕೋವಿಡ್ ಪ್ರಕರಣ ದಾಖಲಾಗಿದೆ. ರಾಮನಗರದ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮದ ಇಬ್ಬರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಹಾಗೂ ಓರ್ವ  ಮಹಿಳೆಗೆ ಕೋವಿಡ್ ಸೋಂಕು ತಗುಲಿದೆ. ಇಬ್ಬರದ್ದೂ ಯಾವುದೇ ಟ್ರಾವೆಲ್ ಹಿಷ್ಟರಿ ಇಲ್ಲ ಎನ್ನಲಾಗಿದೆ.

ಇವರಿಬ್ಬರಿಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೋವಿಡ್ ಪರೀಕ್ಷೆ ಮಾಡಿದ ವೈದ್ಯರು ಕೋವಿಡ್ ಸೋಂಕು ತಗುಲಿದ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಸದ್ಯ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ನಾಲ್ಕು ತಾಲೂಕಿನಲ್ಲೂ ಕೋವಿಡ್ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾಡಳಿತದ ಸೂಚನೆಯಂತೆ ಜಿಲ್ಲೆಯ ನಾಲ್ಕು ತಾಲೂಕುಗಳಿಗೂ ಭೇಟಿ ನೀಡಿ ಡಿಎಚ್‌ಒ ನಿರಂಜನ್‌ ವೈದ್ಯರಿಗೆ ಸೂಚನೆ ನೀಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next