Advertisement

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಜ್ಞಾನತಾಣ ಲೋಕಾರ್ಪಣೆ

01:43 PM Nov 09, 2020 | keerthan |

ಬೆಳ್ತಂಗಡಿ: ಕೋವಿಡ್ ಆಂತರಿಕ ಭಯಭೀತ ಸನ್ನಿವೇಶದಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಗ್ರಾಮಾಭಿವೃದ್ಧಿ ಯೋಜನೆ ಮುಖೇನ ಅತ್ಯುತ್ತಮ ಯೋಜನೆ ಅನುಷ್ಠಾನಗೊಂಡಿದೆ. ಕರ್ನಾಟಕದ ಕಾಂತ್ರಿಕಾರಿ ಬೆಳವಣಿಗೆಗೆ ಕ್ಷೇತ್ರದ ಸಣ್ಣ ಕೊಡುಗೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

Advertisement

ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಕರ್ನಾಟಕ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಅಂತರ್ಜಾಲ ಶಿಕ್ಷಣಕ್ಕೊಂದು ಮಾದರಿಯಾಗಿ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ವಿತರಣೆಯ ಜ್ಞಾನತಾಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಧ.ಗ್ರಾ.ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಪ್ರಾದೇಶಿಕ ನಿರ್ದೇಶಕರಾದ ಶಾಂತಾರಾಮ ಪೈ, ಶ್ರೀಹರಿ, ಜಯಶಂಕರ ಶರ್ಮ, ಜಯರಾಮ ನೆಲ್ಲಿತ್ತಾಯ, ನಿರ್ದೇಶಕರಾದ ಚಂದ್ರಶೇಖರ, ಓಂಪ್ರಕಾಶ್ ಉಪಸ್ಥಿತರಿದ್ದರು.

ಗ್ರಾ.ಯೋಜನೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಮಮತಾ ರಾವ್ ಪ್ರಸ್ತಾವಿಸಿ, ಸ್ವಾಗತಿಸಿದರು. ಬೆಳ್ತಂಗಡಿ ಯೋಜನಾಧಿಕಾರಿ ಜಯಕರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಗುರುವಾಯನಕೆರೆ ಯೋಜನಾಧಿಕಾರಿ ಯಶವಂತ ಧನ್ಯವಾದವನ್ನಿತ್ತರು.

Advertisement

ರಾಜ್ಯದ ಸುಮಾರು ಒಂದು ಲಕ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅಂತರ್ಜಾಲ ಶಿಕ್ಷಣವನ್ನು ಪ್ರಸಕ್ತ ವರ್ಷ ಒದಗಿಸಲಾಗುತ್ತಿದೆ. 5ನೇ ತರಗತಿಯಿಂದ 10ನೇ ತರಗತಿ ವರೆಗೆ ಆರು ವರ್ಷಗಳ ಪಠ್ಯ ಗಳನ್ನು ಕನ್ನಡ ಮಾಧ್ಯಮದಲ್ಲಿ ತಯಾರಿಸಲಾಗಿದ್ದು, ಇದು ಪ್ರೀ ಲೋಡೆಡ್ ಆಗಿದ್ದು, ಇಂಟರ್ನೆಟ್ ನ ಅವಶ್ಯಕತೆಯಿಲ್ಲ. ಇದನ್ನು ಗ್ರಾಮೀಣ ವಿದ್ಯಾರ್ಥಿಗಳಿಗೆ ಟ್ಯಾಬ್ ಸೌಕರ್ಯಗಳನ್ನು ಒದಗಿಸಿ ಕೊಡಲಾಗುತ್ತದೆ.

ಕಾಲೇಜು ವಿದ್ಯಾರ್ಥಿಗಳಿಗೆ ಅಂತರ್ಜಾಲ ಶಿಕ್ಷಣ ಮಾಡಿಕೊಳ್ಳಲು ಲ್ಯಾಪ್ ಟಾಪ್ ಗಳನ್ನು ಕೊಡಲಾಗುತ್ತದೆ. ಯೋಜನೆಯ ವತಿಯಿಂದ 21 ಕೋಟಿ ರೂ. ವೆಚ್ಚದಲ್ಲಿ ಪ್ರಥಮ ವರ್ಷ 20000 ಟ್ಯಾಬ್‌ ಗಳು ಹಾಗೂ 10000 ಲ್ಯಾಪ್ ಟಾಪ್ ಗಳನ್ನು ಮತ್ತು 450 ಮಂದಿ ಗೌರವ ಶಿಕ್ಷಕರನ್ನು ಒದಗಿಸಲಾಗುತ್ತದೆ.

ರಾಜ್ಯಾದ್ಯಂತ ಏಕಕಾಲದಲ್ಲಿ ಕಾರ್ಯಕ್ರಮ ಅನುಷ್ಠಾನ ಗೊಳಿಸಲಾಗಿದ್ದು, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next