ಹೊಸದಿಲ್ಲಿ: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವ “ಶಿವಲಿಂಗ’ ಎಷ್ಟು ವರ್ಷ ಹಳೆಯದು ಎಂದು ತಿಳಿಯಲು ಕಾರ್ಬನ್ ಡೇಟಿಂಗ್ ಪರೀಕ್ಷೆ ಹಾಗೂ ವೈಜ್ಞಾನಿಕ ಸರ್ವೇಗೆ ಅಲಹಾಬಾದ್ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಮುಸ್ಲಿಂ ಸಮುದಾಯದ ಪರ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಶುಕ್ರವಾರ ನಡೆಯಲಿದೆ.
Advertisement
ಗುರುವಾರ ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಸಲ್ಲಿಕೆಯಾಗಿರುವ ಅರ್ಜಿಯನ್ನು ವಿಚಾರಣೆಗಾಗಿ ಅಂಗೀಕರಿಸಿರುವುದಾಗಿ ಹೇಳಿತು.