Advertisement
ಇವರ ಅಂತಿಮ ದಹನ ಕ್ರೀಯಾದಿ ವಿಧಿ ವಿಧಾನಗಳು ಗುರುವಾರ (ನ.21) ಮುಂಜಾನೆ 11 ಗಂಟೆಗೆ ದೇವಲಾಪೂರ ಗ್ರಾಮದ ಅಷ್ಟಮ ನಂದೀಶ್ವರ ಕ್ಷೇತ್ರದಲ್ಲಿ ಜರುಗಲಿದೆ. ಅಪಾರ ಭಕ್ತ ಸಮೂಹ ಹೊಂದಿದ್ದ ಮುನಿಗಳು ದೇವಲಾಪೂರ ಗ್ರಾಮದಲ್ಲಿ ಅಷ್ಟಮ ನಂದೀಶ ಕ್ಷೇತ್ರದ ಸಂಸ್ಥಾಪಕರಾಗಿದ್ದರು. ಜ್ಞಾನತೀರ್ಥ ವಿದ್ಯಾಪೀಠ ಶಿಕ್ಷಣ ಸ್ಥಾಪಿಸಿದ್ದಾರೆ. 300 ಕ್ಕೂ ಹೆಚ್ಚು ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣ ಸಂಸ್ಥೆಯಲ್ಲಿ ಲೌಕೀಕ ಶಿಕ್ಷಣದೊಂದಿಗೆ ಧಾರ್ಮಿಕ, ಮೌಲ್ಯ ಶಿಕ್ಷಣ ನಡೆದಿದೆ. ಕುಲಭೂಷಣ ಅಲ್ಪಸಂಖ್ಯಾತರ ಕ್ರೆಡಿಟ್ ಸೊಸೈಟಿ ಸ್ಥಾಪಿಸಿ ಗ್ರಾಮೀಣ ಜನರ ಆರ್ಥಿಕತೆಗೆ ಅನುಕೂಲತೆ ಮಾಡಿದ್ದರು. ಧಾರವಾಡ, ಬೆಳಗಾವಿ ಜಿಲ್ಲೆಯ ನೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ಜೀನ ಮಂದಿರಗಳನ್ನು ಕಟ್ಟಿಸಿ ಜನರ ಕಲ್ಯಾಣಕ್ಕೆ ನೆರವಾಗಿದ್ದರು. ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ಜಯಕೀರ್ತಿ ವಿದ್ಯಾಪೀಠ, ಸಹಕಾರಿ ಸಂಘ, ಜೀನ ಮಂದಿರಗಳನ್ನು ನಿರ್ಮಿಸಿದ್ದಾರೆ. ಪೂಜ್ಯರು 108 ಸಮೇದ ಶಿಖರಜಿಯ ಯಾತ್ರೆ, 5 ಬಾರಿ ಸಂಘದೊಂದಿಗೆ ಪಾದಯಾತ್ರೆ ಕೂಡಾ ಮಾಡಿದ್ದಾರೆ.
Advertisement
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
07:52 PM Nov 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.