ಬಿಹಾರ : ನೀವು ಮದ್ಯ ಸೇವಿಸಿದ್ರೆ ಸಾಯ್ತೀರಿ… ಎಚ್ಚರ ವಹಿಸಿದರೆ ಒಳ್ಳೆಯದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜನತೆಗೆ ಎಚ್ಚರಿಕೆ ನೀಡಿದ್ದಾರೆ.
ಬಿಹಾರದಲ್ಲಿ ಅಕ್ರಮ ಮದ್ಯ ಸೇವಿಸಿ ಇದುವರೆಗೆ 38 ಮಂದಿ ಸಾವನ್ನಪ್ಪಿದ್ದು, ಇದರ ವಿರುದ್ಧ ಬಿಜೆಪಿ ಸಾಕಷ್ಟು ಬಾರಿ ಪ್ರತಿಭಟನೆಯನ್ನೂ ಮಾಡಿದೆ, ಅಲ್ಲದೆ ಬುಧವಾರ ನಡೆದ ಘಟನೆ ಸದನದಲ್ಲೂ ಭಾರಿ ಸದ್ದು ಮಾಡಿದ್ದು ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಮದ್ಯ ಸೇವಿಸಿದರೆ ನೀವು ಸಾಯುತೀರಾ, ನಿಮ್ಮ ಜೀವದ ಮೇಲೆ ನಿಮಗೆ ಎಚ್ಚರವಿರಲಿ ಎಂದು ಜನರಿಗೆ ಹೇಳಿದ್ದಾರೆ.
ಬಿಹಾರದಲ್ಲಿ ಈಗಾಗಲೇ ಮದ್ಯ ಮಾರಾಟಕ್ಕೆ ನಿಷೇಧ ಇದ್ದರೂ ದುಷ್ಕರ್ಮಿಗಳು ಕೆಲವೊಂದು ಕಡೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ, ಈ ರೀತಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಿ ಎಂದು ಜನರಲ್ಲಿ ಮನವಿ ಮಾಡಿದರು.
ಬುಧವಾರ ಬಿಹಾರದ ಸರನ್ ಜಿಲ್ಲೆಯ ಛಾಪ್ರಾ ಪ್ರದೇಶದಲ್ಲಿ ಅಕ್ರಮ ಮದ್ಯ ಸೇವಿಸಿ 17 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಕುರಿತು ವಿಧಾನ ಸಭೆಯಲ್ಲಿ ಬಿಜೆಪಿ ಶಾಸಕರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ್ದು ಈ ವೇಳೆ ತಾಳ್ಮೆ ಕಳೆದುಕೊಂಡ ಮುಖ್ಯಮಂತ್ರಿ ಬಿಜೆಪಿ ಶಾಸಕರನ್ನು ನೀವು ಕುಡಿದಿದ್ದೀರಿ ಎಂದು ಕಲಾಪದಲ್ಲೇ ಹೇಳಿದ ಮಾತು ಬಾರಿ ಕೋಲಾಹಲಕ್ಕೆ ಕಾರಣವಾಗಿತ್ತು ಅಲ್ಲದೆ ಸಿಎಂ ಹೇಳಿಕೆ ವಿರುದ್ಧ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ: ಮೆಹ್ರೌಲಿ ಅರಣ್ಯದಲ್ಲಿ ಸಿಕ್ಕ ಮೂಳೆಗಳು ಶ್ರದ್ಧಾಳದ್ದೆ… ಡಿಎನ್‌ಎ ಪರೀಕ್ಷೆಯಲ್ಲಿ ಸಾಬೀತು!