Advertisement
ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳೆಲ್ಲಿ?ರಾಜ್ಯದ 11 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ (ಬೆಂಗಳೂರು, ಬೆಳಗಾವಿ, ಬೀದರ್, ಕಲಬುರಗಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮೈಸೂರು, ಮಂಗಳೂರು, ಶಿವಮೊಗ್ಗ ಮತ್ತು ಉಡುಪಿ. ಮತ್ತು 3 ಜಿಲ್ಲಾ ಕೇಂದ್ರಗಳಲ್ಲಿ(ಬೆಂಗಳೂರು ಮತ್ತು
ಹುಬ್ಬಳ್ಳಿ-ಧಾರವಾಡ ಮಂಗಳೂರು)ಮುಖ್ಯ ಪರೀಕ್ಷೆ ಆನ್‌ಲೈನ್‌ನಲ್ಲಿ ನಡೆಯಲಿದೆ.
ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ 9, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 61, ಬ್ಯಾಂಕ್ ಆಫ್ ಇಂಡಿಯಾ 3, ಪಂಜಾಬ್ ನ್ಯಾಷನಲ್ ಬ್ಯಾಂಕ್ 15, ಕೆನರಾ ಬ್ಯಾಂಕ್‌ನಲ್ಲಿ 165 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ. ಕರ್ನಾಟಕದಲ್ಲಿ ಒಟ್ಟು 253 ಹುದ್ದೆಗಳಿವೆ. ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದ
ಯಾವುದೇ ಸಮಾನ ಅರ್ಹತೆ. ಅಭ್ಯರ್ಥಿಯು ಕಂಪ್ಯೂಟರ್‌ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರುವುದು ಕಡ್ಡಾಯ.
Related Articles
ಕರ್ನಾಟಕದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್ ನೀಡಿದೆ. ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆ ನಮೂದಿಸಬೇಕು.
Advertisement
ಸಂದರ್ಶನವಿಲ್ಲಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ಮತ್ತು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಆಧಾರದ ಮೇಲೆ ಅವರಿಗೆ ತಾತ್ಕಾಲಿಕವಾಗಿ ನೇಮಕಾತಿ ಪತ್ರ
ವಿತರಿಸಲಾಗುತ್ತದೆ. ಅರ್ಜಿ ಸಲ್ಲಿಕೆಯ ದಿನಾಂಕ: ಜು.1ರಿಂದ ಜು.21, 2023ರ ವರೆಗೆ. ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಆಯ್ಕೆಯ ಬ್ಯಾಂಕಿನ ಆದ್ಯತೆಯನ್ನು ನಮೂದಿಸಬೇಕು.ಮತ್ತೆ ಬದಲಾವಣೆಗೆ ಅವಕಾಶಗಳಿರುವುದಿಲ್ಲ. ಪರೀಕ್ಷಾ ಪೂರ್ವ ತರಬೇತಿ:
ಐಬಿಪಿಎಸ್ ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತ ಅಭ್ಯರ್ಥಿಗಳು, ಮಾಜಿ ಸೈನಿಕರು, ವಿಕಲಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು, ತರಬೇತಿ ಸ್ಥಳದ ಖರ್ಚು ವೆಚ್ಚಗಳನ್ನು ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳೇ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರಗಳಿವೆ. ಪರೀಕ್ಷಾ ಪ್ರಕ್ರಿಯೆ:
ಮೊದಲ ಹಂತ: ಆನ್‌ಲೈ ನ್ ಪೂರ್ವಭಾವಿ ಪರೀಕ್ಷೆ – ಸೆಪ್ಟಂಬರ್ 2023 ಎರಡನೇ ಹಂತ: ಆನ್‌ಲೈನ್ ಮುಖ್ಯ ಪರೀಕ್ಷೆ – ಸೆಪ್ಟಂಬರ್ ಅಕ್ಟೋಬರ್, 2023 ಪ್ರಾತಿನಿಧಿಕ ಹಂಚಿಕೆ: ಎಪ್ರಿಲ್ 2024. ವಯೋಮಿತಿ:
01.07.2023ಕ್ಕೆ, 20 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 1.07.2023ಕ್ಕೆ 28 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ 20 ವರ್ಷದಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸರಕಾರದ ನಿಯಮದಂತೆ ಎಸ್‌ಸಿ/ ಎಸ್‌ಟಿ
ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಶುಲ್ಕ ಪಾವತಿ/ಅರ್ಜಿ ಶುಲ್ಕ:
ನೋಂದಣಿ ಅನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಆನ್‌ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಾಮಾನ್ಯ ಮತ್ತು ಇತರ ಹಿಂದುಳಿದ ವರ್ಗದ
ಅಭ್ಯರ್ಥಿಗಳಿಗೆ 850 ರೂ. ಹಾಗೂ ಎಸ್‌ಸಿ/ಎಸ್‌ಟಿ/ವಿಕಲಚೇತನರು/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175 ರೂ. ಶುಲ್ಕ ನಿಗದಿಪಡಿಸಲಾಗಿದೆ. ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗೆ ವೆಬ್: https://www.ibps.in/