Advertisement

ಮನೆ ಬಾಗಿಲಿಗೆ ಜಾಬ್‌ ಕಾರ್ಡ್‌ ನೀಡಿ

02:19 PM Sep 07, 2020 | Suhan S |

ಶಿಡ್ಲಘಟ್ಟ: ಗ್ರಾಪಂ ವ್ಯಾಪ್ತಿಗಳಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಇಲಾಖೆಯ ಪಂಚತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕೆಂದು ತಾಪಂ ಇಒ ಬಿ.ಶಿವಕುಮಾರ್‌ ಸೂಚಿಸಿದರು.

Advertisement

ಪಟ್ಟಣದ ತಾಪಂ ಸಭಾಂಗಣದಲ್ಲಿ ಗ್ರಾಪಂ ಗಣಕಯಂತ್ರ ನಿರ್ವಾಹಕರು (ಆಪರೇಟರ್‌)ಗಳೊಂದಿಗೆ ಸಭೆ ನಡೆಸಿದ ಅವರು, ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಸರ್ಕಾರದ ಸೂಚನೆಯನ್ನು ಪಾಲಿಸಿ ಜಾಬ್‌ ಕಾರ್ಡ್‌ಗಳನ್ನು ತ್ವರಿತವಾಗಿ ವಿತರಿಸಬೇಕೆಂದು ಸೂಚಿಸಿದರು.

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿರುವ ನರೇಗಾ ಯೋಜನೆಯನ್ನು ಪ್ರತಿಯೊಬ್ಬರ ಮನೆಯ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ, ಜಾಬ್‌ ಕಾರ್ಡ್‌ ಅಥವಾ ಇನ್ನಿತರೆ ಸೌಲಭ್ಯ ಪಡೆಯಲು ಬರುವ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ಸೂಚಿಸಿದರು. ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗಾಗಿಕೈಗೊಂಡ ಯೋಜನೆಗಳಲ್ಲಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಡಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದ ಅವರು, ಸೆಪ್ಟೆಂಬರ್‌ ತಿಂಗಳಿನಲ್ಲಿ ಸೋಕ್‌ ಫಿಟ್‌ ನಿರ್ಮಾಣ ಮಾಡಲಾಗುತ್ತಿದ್ದು, ಇದಕ್ಕೆ ಸಂಪೂರ್ಣವಾಗಿ ಸಹಕರಿಸಬೇಕಲ್ಲದೇ, ಪಿಡಿಒಗೆ ಪೂರಕವಾಗಿ ತೆರಿಗೆ ವಸೂಲಿ ಮಾಡಲುಹೆಚ್ಚಿನ ಸಹಕಾರ ನೀಡಬೇಕೆಂದು ಸಲಹೆ ನೀಡಿದರು. ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next