Advertisement
ಸಚಿತಾ ರೈ ವಿರುದ್ದ ರಕ್ಷಿತಾ ಎಂಬವರು ಪೊಲೀಸರಿಗೆ ಲಿಖೀತ ದೂರು ನೀಡಿದ್ದು, ಕೇರಳದ ನೀರಾ ವರಿ ಇಲಾಖೆ ಅಥವಾ ಎಸ್‌ಬಿಐ ಬ್ಯಾಂಕಿನಲ್ಲಿ ಉದ್ಯೋಗ ಒದಗಿಸುವ ಅವಕಾಶವಿದೆ ಎಂದು ನಂಬಿಸಿ ಒಟ್ಟು 13,11,600 ರೂಪಾಯಿ ಪಡೆಯಲಾಗಿದೆ ಎಂದೂ, ಸದ್ರಿ ಹಣದ ಪೈಕಿ 8,66,868ನ್ನು ಬ್ಯಾಂಕ್ ಖಾತೆ ಮೂಲಕ ವರ್ಗಾಯಿಸಲಾಗಿದ್ದರೆ, ಉಳಿಕೆ ಮೊತ್ತವನ್ನು ಗೂಗಲ್ ಪೇ ಮೂಲಕ ಪಾವತಿಸಿರುತ್ತೇನೆಂದು ದೂರಿನಲ್ಲಿ ತಿಳಿಸಿದ್ದಾರೆ.
ರಕ್ಷಿತಾರ ತಂದೆ ನಿಗಮವೊಂದರ ಉದ್ಯೋಗಿಯಾಗಿದ್ದು , ಇತ್ತೀಚೆಗೆ ನಿವೃತಿಯಾಗಿರುತ್ತಾರೆ. ನಿವೃತ್ತಿ ವೇಳೆ ದೊರಕಿದ ಹಣದಲ್ಲಿ ಮಗಳ ಭವಿಷ್ಯ ಉಜ್ವಲವಾಗಲಿ ಎಂದು ಮೊದಲ ಕಂತು ನೀಡಿದ್ದರು. ಬಳಿಕ ನಂಬಿಕೆ ಮೂಡಿಸುವಂತೆ ಮತ್ತೆ ಮತ್ತೆ ಹಣ ಕೇಳಿದಾಗ , ಮೊದಲು ಕೊಟ್ಟ ಹಣದ ಸುರಕ್ಷೆ ನೆಲೆಯಲ್ಲಿ ಮತ್ತೆ ಮತ್ತೆ ಹಣವನ್ನು ಪಾವತಿಸುತ್ತಾ ಹೋದ ಅವರು ಈಗ ವಂಚನಾ ಜಾಲ ಬಹಿರಂಗಗೊಂಡ ಬಳಿಕ ಆಘಾತಕ್ಕೆ ಒಳಗಾಗಿದ್ದು, ಆರೋಗ್ಯದಲ್ಲಿ ಅಸ್ವಸ್ಥಗೊಂಡಿದ್ದಾರೆ.