Advertisement
ವಿಕಾಸಸೌಧದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಭಾಗವಾರು ಉದ್ಯೋಗ ಮೇಳ ನಡೆಸುವ ಮಾದರಿಯಂತೆ ರಾಜ್ಯದ ಎರಡು ಕಡೆ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕೇಂದ್ರ ಪ್ರಾರಂಭಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಹಾಗೂ ಮೈಸೂರಿನಲ್ಲಿ ಈ ಎರಡು ತರಬೇತಿ ಕೇಂದ್ರಗಳು ಪ್ರಾರಂಭವಾಗಲಿವೆ. ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಮುಗಿಸಿದ ಸುಮಾರು 25 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ. ಈಗಾಗಲೇ ಇದಕ್ಕೆ ಇಲಾಖೆ ವತಿಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
Related Articles
Advertisement
ಸಮ್ಮೇಳನದಲ್ಲಿ ವೈಮಾನಿಕ ಮತ್ತು ನಾಗರಿಕ ವಲಯದಿಂದ 26, ಕೃಷಿ 6, ಉಡುಪು ವಲಯ 6, ಆಟೋಮೆಟಿವ್ 74, ಸೌಂದರ್ಯ ವಲಯ 3, ಆರೋಗ್ಯ ಕ್ಷೇತ್ರ 27, ಎಲೆಕ್ಟ್ರಾನಿಕ್ ವಲಯ 29, ಜವಳಿ 1, ಟೆಲಿಕಾಂ 19, ಸೇವಾ ವಲಯ 36, ಬಿಎಫ್ಎಸ್‌ಐ ವಲಯ 91, ಐಟಿ-ಐಟಿಎಸ್‌ಐ ವಲಯ 80, ಮೂಲಭೂತ ಉಪಕರಣಗಳ ವಲಯ 1 ಸಹಿತ ಒಟ್ಟು 598 ಕಂಪೆನಿಗಳು ಪಾಲ್ಗೊಂಡಿದ್ದವು ಎಂದು ಅವರು ಮಾಹಿತಿ ನೀಡಿದ್ದಾರೆ.ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿದೇರ್ಶಕಿ ಎಂ.ಕನಗವಲ್ಲಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಸಿ.ಆರ್. ಕೃಷ್ಣ ಕುಮಾರ್ ಉಪಸ್ಥಿತರಿದ್ದರು. ಐಬಿಎಂನಿಂದ 5 ಲಕ್ಷ ಮಂದಿಗೆ ತರಬೇತಿ
ಯುವ ಜನಾಂಗವನ್ನು ಉದ್ಯಮಶೀಲತೆಯಲ್ಲಿ ತೊಡಗಿಸಿಕೊಳ್ಳಲು ಕಲಿಕೆ ಜತೆ ಕೌಶಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಪದವಿ ಅಥವಾ ಇನ್ನಿತರ ಕೋರ್ಸ್ ಓದುವಾಗಲೇ ಔದ್ಯೋಗಿಕ ಕ್ಷೇತ್ರಗಳಲ್ಲಿ ಬೇಕಾದ ಕೌಶಲಗಳನ್ನು° ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದೇ ಯೋಜನೆಯ ಉದ್ದೇಶವಾಗಿದೆ. ಈಗಾಗಲೇ 73 ಕಂಪೆನಿಗಳು ಮುಂದೆ ಬಂದಿವೆ. ಇದರ ಜತೆಗೆ ಉದ್ಯೋಗದ ತರಬೇತಿ ನೀಡಲು ಉದ್ದಿಮೆಗಳ ಜತೆ ಮಾತುಕತೆ ನಡೆಸಲಾಗಿದೆ. ಕೌಶಲ ಅಭಿವೃದ್ಧಿ ನಿಗಮದ ಜಾಲತಾಣದಲ್ಲಿ ನೋಂದಾಯಿಸಲಾದ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಕೆಲಸ ನೀಡುವ ಹೊಣೆಗಾರಿಕೆ ಕಂಪೆನಿಗಳು ವಹಿಸಿಕೊಂಡಿದ್ದು, ಈಗಾಗಲೇ ಸುಮಾರು 40 ಕಂಪೆನಿಗಳು ಮುಂದೆ ಬಂದಿವೆ. ಐಬಿಎಂ ಕಂಪೆನಿ 5 ಲಕ್ಷ ಮಂದಿಗೆ ತರಬೇತಿ ನೀಡಲು ಮುಂದೆ ಬಂದಿದೆ ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಸಾಗರೋತ್ತರ ಕಂಪೆನಿ ಪ್ರಾರಂಭ
ವಿದೇಶಿ ಕಂಪೆನಿಗಳಿಗೆ ಬೇಕಾದ ಮಾನವ ಸಂಪನ್ಮೂಲ ಒದಗಿಸಿಕೊಡಲು ಅನುಕೂಲವಾಗುವಂತೆ ರಾಜ್ಯ ಸರಕಾರವು ಕೇರಳ ಮಾದರಿಯಲ್ಲಿ ಸಾಗರೋತ್ತರ ಕಂಪೆನಿ ಪ್ರಾರಂಭಿಸಲಿದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದರು.