Advertisement

ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಪದಗ್ರಹಣ: ಉಪಾಧ್ಯಕ್ಷರಾದ ಕಮಲಾ ಹ್ಯಾರಿಸ್‌

10:28 PM Jan 20, 2021 | Team Udayavani |

ವಾಷಿಂಗ್ಟನ್ ಡಿಸಿ : ಅಮೆರಿಕಾದ 46 ನೇ ಅಧ್ಯಕ್ಷರಾಗಿ ಡೆಮಾಕ್ರಾಟ್ ಪಕ್ಷದ ನಾಯಕ ಜೋ ಬೈಡೆನ್ ಕ್ಯಾಪಿಟಲ್ ಬಿಲ್ಡಿಂಗ್ ನ ವೆಸ್ಟ್ ಫ್ರಂಟ್ ನಲ್ಲಿ ಬುಧವಾರ (ಜ.20 )  ಪ್ರಮಾಣ ವಚನ ಸ್ವೀಕರಿಸಿದರು.ಇದರೊಂದಿಗೆ ಅಮೆರಿಕಾದ ಉಪಾಧ್ಯಕ್ಷರಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್‌ ಕೂಡ ಪದಗ್ರಹಣ ಮಾಡಿದರು.

Advertisement

ಜೋ ಬೈಡೆನ್‌ ಅವರಿಗೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಜಾನ್‌ ರಾಬರ್ಟ್ಸ್‌ ಪ್ರತಿಜ್ಞಾವಿಧಿ ಬೋಧಿಸಿದರು. ಈ ಮೂಲಕ ಅಮೆರಿಕಾದಲ್ಲಿ ಜೋ ಬೈಡೆನ್ ಯುಗ ಅಧಿಕೃತವಾಗಿ ಆರಂಭವಾಗಿದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ  ಸೋನಿಯಾ ಸೋಟೊಮೇಯರ್‌ ಭಾರತದ ತಮಿಳುನಾಡು ಮೂಲದ ಕಮಲಾ ಹ್ಯಾರಿಸ್‌ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ಅಮೆರಿಕಾದ ಉಪಾಧ್ಯಕ್ಷರಾದ ಭಾರತದ ಮೊದಲ ಸಂಜಾತ ಮಹಿಳೆ ಎನ್ನುವ ಹೆಗ್ಗಳಿಕೆಗೆ ಕಮಲಾ ಹ್ಯಾರಿಸ್ ಪಾತ್ರರಾದರು.

ಈ ವೇಳೆ ನಿರ್ಗಮಿತ ಅಧ್ಯಕ್ಷ ಡಿನಾಲ್ಡ್ ಟ್ರಂಪ್ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಪ್ರದಾಯವನ್ನು ಮುರಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next