Advertisement

Jog Falls: ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ: ಸಂಸದ ಬಿ.ವೈ.ರಾಘವೇಂದ್ರ

07:33 PM Jul 18, 2024 | Esha Prasanna |

ಸಾಗರ: ವಿಶ್ವವಿಖ್ಯಾತ ಜೋಗ ಜಲಪಾತ (Joga Falls)ಕ್ಕೆ ವಿಶ್ವದರ್ಜೆಯ ಸ್ಪರ್ಶ ನೀಡುವಲ್ಲಿ ವಿಶೇಷ ಗಮನ ನೀಡಲಾಗಿದ್ದು, ಈಗಿನ ಬದಲಾವಣೆಗಳಿಂದ ಮಲೆನಾಡ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬಲ ಸಿಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

Advertisement

ತಾಲೂಕಿನ ಜೋಗ ಜಲಪಾತ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕಳೆದ ಅವಧಿಯ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಹಯೋಗದಲ್ಲಿ ಜಲಪಾತದ ಆವರಣದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸಮಗ್ರ ಅಭಿವೃದ್ಧಿಗೆ ಮುಂದಾಗಿದೆ ಎಂದರು.

ವರ್ಷ ಪೂರ್ತಿ ಜಲಪಾತದ ವೈಭವವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳುವ ಸದುದ್ದೇಶದಿಂದ ಸುಮಾರು 185 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆಯ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ಗುಣಮಟ್ಟ ಕಾಯ್ದುಕೊಂಡು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಪ್ರಮುಖರಾದ ಬಿಜೆಪಿ ಪ್ರಮುಖ ಪ್ರಕಾಶ್ ತಲಕಾಲಕೊಪ್ಪ, ಮಾಜಿ ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಇನ್ನಿತರರು ಜೊತೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next