Advertisement

ವಡ್ಡರ್ಸೆ ರಘುರಾಮ ಶೆಟ್ಟಿ  ಪತ್ರಿಕೋದ್ಯಮ ಪ್ರಶಸ್ತಿಗೆ ಜೋಗಿ ಆಯ್ಕೆ

09:46 AM Jul 05, 2018 | Team Udayavani |

ಕೋಟ: ಬ್ರಹ್ಮಾವರ ತಾ| ಪತ್ರಕರ್ತರ ಸಂಘದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಖ್ಯಾತ ಸಾಹಿತಿ, ಪತ್ರಕರ್ತ ಜೋಗಿ ಆಯ್ಕೆಯಾಗಿದ್ದಾರೆ. ಆ. 5ರಂದು ಬ್ರಹ್ಮಾವರ ಬಂಟರ ಭವನದಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಮಂಗಳವಾರ ಕೋಟದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Advertisement

ವಡ್ಡರ್ಸೆ ರಘುರಾಮ ಶೆಟ್ಟಿಯವರು ಪತ್ರಿಕೋದ್ಯಮವನ್ನು ಸಮಾಜಶಾಸ್ತ್ರೀಯ ದೃಷ್ಟಿಕೋನದೊಂದಿಗೆ ಕಂಡವರು ಹಾಗೂ  “ಮುಂಗಾರು’ ಪತ್ರಿಕೆಯನ್ನು ಮುನ್ನಡೆಸಿ ನೂರಾರು ಯುವ ಪತ್ರಕರ್ತರನ್ನು ರೂಪುಗೊಳಿಸಿದವರು. 
ಡೆಕ್ಕನ್‌ ಹೆರಾಲ್ಡ್‌,  ಪ್ರಜಾವಾಣಿ ಪತ್ರಿಕೆಯಲ್ಲಿ  ಸುದೀರ್ಘ‌ ಕಾಲ ಪತ್ರಕರ್ತರಾಗಿ ದುಡಿದಿದ್ದಾರೆ.  ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಿಕರ್ತರ ಸಂಘದ ರಾಜ್ಯಾಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಆದ್ದರಿಂದ ಕಳೆದ ಎರಡು ವರ್ಷಗಳಿಂದ  ಇವರ ಹೆಸರಿನಲ್ಲಿ ಬ್ರಹ್ಮಾವರ ಪತ್ರಕರ್ತರ ಸಂಘ ಪತ್ರಿಕೋದ್ಯಮ ಕ್ಷೇತ್ರದಲ್ಲಿ ದುಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next