ನಗರದ ಪೊಲೀಸ್ ಮೈತ್ರಿ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಪೊಲೀಸ್, ಮಕ್ಕಳ ವಿಶೇಷ ಪೊಲೀಸ್ ಘಟಕ ವತಿಯಿಂದ ಕಾಣೆಯಾದ ಮಕ್ಕಳ ಪತ್ತೆ ಬಗ್ಗೆ ಆಪರೇಷನ್ ಮುಸ್ಕಲ್ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Advertisement
ಬಸ್ ಹಾಗೂ ರೈಲ್ವೆ ನಿಲ್ದಾಣ ಹಾಗೂ ಬೀದಿಗಳಲ್ಲಿ ಅಪರಿಚಿತ ಮಕ್ಕಳು ಓಡಾಡುತ್ತಿರುತ್ತಾರೆ. ಇಂತಹ ಮಕ್ಕಳನ್ನು ಗಮನಿಸಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತಾಗಬೇಕು. 18 ವರ್ಷದೊಳಗಿನ ಮಕ್ಕಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಎಲ್ಲರೂ ಸಹಕರಿಸಬೇಕಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ 32ಕ್ಕೂ ಹೆಚ್ಚು ಮಕ್ಕಳು ಕಾಣೆ ಯಾಗಿದ್ದು, 30 ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಅಪರಿಚಿತ ಮಕ್ಕಳ ಚಲನವಲನ, ಅಪರಿಚಿತ ಮಕ್ಕಳನ್ನು ಹೇಗೆ ಪ್ರೀತಿಯಿಂದ ಕಾಣುವುದು. ಮಕ್ಕಳಿಗೆ ರಕ್ಷಣೆಗೆ ನೀಡುವ ನಿಟ್ಟಿನಲ್ಲಿ ಯಾವ ರೀತಿ ಮುಂದಾಗಬೇಕು ಎಂಬ ಬಗ್ಗೆ ಪೊಲೀಸರಿಗೆ ಪೊಲೀಸ್ ಅಕಾಡೆಮಿ ವತಿಯಿಂದ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸರಕಾರೇತರ ಸಂಸ್ಥೆಗಳು ಕೈಜೋಡಿಸಬೇಕಿದೆ. ಕಾಣೆಯಾದ ಅಪರಿಚಿತ ಮಕ್ಕಳಿಗೆ ಪುನರ್ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರ್ಪಡೆ ಮಾಡುವುದು ಮತ್ತಿತರ ಬಗ್ಗೆ ಪ್ರತಿ ಪೊಲೀಸ್ ಠಾಣಾ ಮತ್ತು ಗ್ರಾ.ಪಂ. ಮಟ್ಟದಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಪಿ. ರಾಜೇಂದ್ರ ಪ್ರಸಾದ್ ಅವರು ಹೇಳಿದರು.
Related Articles
Advertisement
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಾದ ಭಾಗ್ಯಲಕ್ಷ್ಮೀ ಅವರು ಮಾತನಾಡಿ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರತಿ ಯೊಂದು ಮಕ್ಕಳು ಶಿಕ್ಷಣ ಪಡೆಯಬೇಕು ಎಂದು ಎಸ್‌ಪಿ ಹೇಳಿದರು.
ಎಲ್ಲ ಮಕ್ಕಳು ಶಾಲೆಗೆ ಸೇರುವಂತಾಗಲು ವಿಶೇಷ ದಾಖಲಾತಿ ಆಂದೋಲನವನ್ನು ಶಾಲಾ ಆರಂಭಕ್ಕೂ ಮೊದಲು ಆಯೋಜಿಸಲಾಗುತ್ತದೆ. ಜಿಲ್ಲೆಯಲ್ಲಿ ಸುಮಾರು 48 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದರು. ಇವರಲ್ಲಿ 32 ಮಕ್ಕಳನ್ನು ಮತ್ತೆ ಶಾಲೆಗೆ ಸೇರ್ಪಡೆ ಮಾಡಲಾಗಿದೆ. ಮಕ್ಕಳ ವಿಶೇಷ ಪೊಲೀಸ್ ಘಟಕದ ಇನ್ಸ್‌ಪೆಕ್ಟರ್ ಕರೀಂ ರಾವುತರ್ ಅವರು ಮಾತನಾಡಿ ವರ್ಷಕ್ಕೆ ಎರಡು ಬಾರಿ ಆಪರೇಷನ್ ಮುಸ್ಕಲ್ ಕಾರ್ಯಕ್ರಮವನ್ನು ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.